ಮಡಿಕೇರಿ NEWS DESK ಡಿ.11 : ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಆರೋಪಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಕರೆ ನೀಡಿರುವ ಆರು ಗಂಟೆಗಳ ಕೊಡಗು ಬಂದ್ ಗೆ ಅರೆಕಾಡು ಹೊಸ್ಕೇರಿಯ ಕೊಡವ ವೆಲ್ ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಸೋಸಿಯೇಷನ್ ನ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಇಬ್ಬರು ವೀರ ಸೇನಾಧಿಕಾರಿಗಳನ್ನು ಅಪಮಾನಿಸಿರುವ ಪ್ರಕರಣ ಭಾರತೀಯ ಸೇನಾ ವ್ಯವಸ್ಥೆಗೆ ತೋರಿದ ಅಗೌರವವಾಗಿದೆ. ಆದ್ದರಿಂದ ಇದನ್ನು ದೇಶದ್ರೋಹದ ಪ್ರಕರಣವೆಂದು ಪರಿಗಣಿಸಿ ಕಿಡಿಗೇಡಿಯನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಕೊಡಗಿನ ವೀರ ಪುತ್ರರಾದ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರು ಒಂದು ಜನಾಂಗಕ್ಕೆ ಸೀಮಿತರಾದವರಲ್ಲ, ಬದಲಿಗೆ ಸೇನಾಪಡೆಯ ಶಕ್ತಿಯನ್ನು ಹೆಚ್ಚಿಸಿ ದೇಶಭಕ್ತಿ ಮೆರೆದ ಇಬ್ಬರು ವೀರರು ಇಡೀ ದೇಶದ ಆಸ್ತಿಯಾಗಿದ್ದಾರೆ. ಆದ್ದರಿಂದ ಗುರುವಾರ ಬೆಳಿಗ್ಗೆ 6 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯುವ ಕೊಡಗು ಬಂದ್ ಗೆ ಸರ್ವ ಜನತೆ ಸಂಪೂರ್ಣ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*