ಮಡಿಕೇರಿ ಡಿ.11 NEWS DESK : ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ವಿರಾಜಪೇಟೆಯ ಕುಟ್ಟಂದಿ ಕೆ.ಬಿ.ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವಣ್ಣ ಎಸ್. ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ಕೆಂಚನೂರು ಶಂಕರ, ಕಾರ್ಯಕ್ರಮದ ಆಯೋಜಕರಾದ ವಿದೂಷಿ ಪ್ರೇಮಾಂಜಲಿ ಆಚಾರ್ಯ ಹಾಗೂ ಅತಿಥಿ ಗಣ್ಯರು ಶಿವಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಶಿವಣ್ಣ ಅವರ ಸಾಧನೆಯನ್ನು ಗುರುತಿಸಿ ಇತ್ತೀಚೆಗೆ ಕುಟ್ಟಂದಿ ಕೆ.ಬಿ.ಪ್ರೌಢಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.