ಮಡಿಕೇರಿ ಡಿ.11 NEWS DESK : ಸಾಮಾಜಿಕ ಜಾಲತಾಣಗಳಲ್ಲಿ ದೇಶದ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳಿಗೆ ಅಗೌರವ ತೋರಿದ ಪ್ರಕರಣವನ್ನು ಖಂಡಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಬೆಳಿಗ್ಗೆ 6ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕರೆ ನೀಡಿರುವ ಕೊಡಗು ಬಂದ್ ಗೆ ಕೊಡಗು ಹೆಗ್ಗಡೆ ಸಮಾಜ ಸಂಪೂರ್ಣ ಬೆಂಬಲ ನೀಡುವುದಾಗಿ ಸಮಾಜದ ಕಾರ್ಯದರ್ಶಿ ಪಡಿಞರಂಡ ಪ್ರಭು ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.