ಮಡಿಕೇರಿ NEWS DESK ಡಿ.11 : ಕೊಡಗು ಸರ್ವ ಜನಾಂಗದ ಶಾಂತಿಯ ತೋಟ, ಇಲ್ಲಿ ಧರ್ಮ, ಜಾತಿಗಳನ್ನು ಮೀರಿದ ಬಾಂಧವ್ಯವಿದೆ. ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡರು ಕೊಡಗಿನ ಅಸ್ಮಿತೆಯಾಗಿದ್ದಾರೆ. ಸ್ವಾತಂತ್ರö್ಯ ಹೋರಾಟಗಾರರೇ ಇರಲಿ, ದೇಶಕಾಯುವ ವೀರ ಸೇನಾನಿಗಳೇ ಇರಲಿ ಯಾರಿಗೂ ಅವಮಾನವಾದರೂ ಅದು ಇಡೀ ಕೊಡಗಿನ ಜನತೆಗೆ ಅವಮಾನವಾದಂತೆ ಎಂದು ಕೊಡಗು ಗೌಡ ಯುವ ವೇದಿಕೆ ಅಭಿಪ್ರಾಯಪಟ್ಟಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ, ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಒಬ್ಬ ಅನಾಮಿಕ ಎಂದು ದುರುದ್ದೇಶದಿಂದ ಸುಳ್ಳು ಹೇಳುವ ಮೂಲಕ ಕೊಡಗಿನ ಜನ ಸಮುದಾಯದ ನಡುವೆ ಶಾಂತಿ ಕದಡುವ ಪ್ರಯತ್ನವನ್ನು ಕೆಲವರು ಮಾಡಿದ್ದರು. ಆದರೆ ನ್ಯಾಯಾಲಯದಲ್ಲಿ ಇವರಿಗೆ ಸರಿಯಾದ ಉತ್ತರ ದೊರೆತ್ತಿದ್ದು, ಯುವ ವೇದಿಕೆ ಇದನ್ನು ಸ್ವಾಗತಿಸುವುದಾಗಿ ಹೇಳಿದರು.
ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡರು ಕೊಡಗಿನ ಅಸ್ಮಿತೆಯಾಗಿದ್ದು, ಅವರು 1837ರ ಕೊಡಗು-ಕೆನರಾ ಬ್ರಿಟಿಷ್ ವಿರೋಧಿ ಯುದ್ಧದ ಪ್ರಮುಖ ನಾಯಕರು. ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಗಲ್ಲಿಗೆ ಹಾಕಿದ ದಿನಾಂಕದ ನಿಕರ ವಿವರ “ಕಾಟನ್” ವರದಿಯಲ್ಲಿದೆ. ಅಲ್ಲದೆ 1957ರಲ್ಲಿ ತಿ.ತಾ.ಶರ್ಮ, ನಂತರದಲ್ಲಿ ವಿದ್ವಾಂಸರಾದ ಡಾ.ತಂಬಂಡ ವಿಜಯ್ ಪೂಣಚ್ಚ, ಡಾ.ಪುರುಷೋತ್ತಮ ಬಿಳಿಮಲೆ, ಅರವಿಂದ ಚೊಕ್ಕಾಡಿ, ಡಾ.ಪೂವಪ್ಪ ಕಾಣಿಯೂರು, ಎಂ.ಜಿ.ನಾಗರಾಜ್, ಡಿ.ಎನ್.ಕೃಷ್ಣಯ್ಯ, ಐ.ಮಾ.ಮುತ್ತಣ್ಣ ಇವರುಗಳು ತಮ್ಮ ಕೃತಿಗಳಲ್ಲಿ ಸಮಗ್ರ ಮಾಹಿತಿಯನ್ನು ನೀಡಿದ್ದಾರೆ ಎಂದು ವಿವರಿಸಿದರು. ವಿವಿಧ ಜಾತಿಗಳಿಗೆ ಸೇರಿದ 1837ರ ಹೋರಾಟದ ಕ್ರಾಂತಿಕಾರವೀರರಿಗೆ ಅವಮಾನ ಮಾಡುವುದರ ಮೂಲಕ ಸಮುದಾಯದ ಜನರಿಗೆ ಅಪಮಾನ ಮಾಡಿ ಕೊಡಗಿನಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುವುದು ಕೆಲವು ಸಮಾಜ ವಿರೋಧಿ ವ್ಯಕ್ತಿಗಳ ದಿನನಿತ್ಯದ ಕೆಲಸವಾಗಿದೆ. ಕೊಡಗಿನ ಹೆಮ್ಮೆಯ ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡ ಹಾಗೂ ಇತರ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಈ ರೀತಿಯ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರೆ ಕೊಡಗು ಗೌಡ ಯುವ ವೇದಿಕೆ ಸೂಕ್ತ ರೀತಿಯಲ್ಲಿ ಉತ್ತರ ನೀಡಲಿದೆ ಎಂದು ಎಚ್ಚರಿಕೆ ನೀಡಿದರು. ಅಪ್ಪಯ್ಯ ಗೌಡರ ವಿಷಯವನ್ನು ಪಠ್ಯಪುಸ್ತಕಕ್ಕೆ ಮರು ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಅಪ್ಪಯ್ಯ ಗೌಡರ ಹುತಾತ್ಮ ದಿನದಂದು ಯುವ ವೇದಿಕೆ ಶಾಸಕರು ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಆಡಳಿತ ವ್ಯವಸ್ಥೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಯುವ ವೇದಿಕೆಯ ಸಹ ಕಾರ್ಯದರ್ಶಿ ಕೆದಂಬಾಡಿ ಕಾಂಚನ ಗೌಡ ಮಾತನಾಡಿ, ಸ್ವಾತಂತ್ರö್ಯ ಹೋರಾಟಗಾರ ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಕೆಲವರು ಮಾಡುತ್ತಿರುವ ಅಪಮಾನವನ್ನು ಕೂಡ ಹೋರಾಟಗಾರರು ಗಮನಿಸಬೇಕಾಗುತ್ತದೆ ಎಂದರು. ಮುAದಿನ ದಿನಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುವ ಕಿಡಿಗೇಡಿಗಳಿಗೆ ಕಾನೂನು ಕ್ರಮದ ಮೂಲಕ ಪಾಠ ಕಲಿಸಲಿದ್ದೇವೆ. ದೇಶ ಪ್ರೇಮಿಗಳ ಮೇಲಿನ ಗೌರವ ಎಲ್ಲಾ ಜಾತಿ, ಧರ್ಮಗಳ ಗಡಿಮೀರಿ ನಿಲ್ಲಬೇಕು ಎಂಬುವುದೇ ನಮ್ಮ ಆಶಯ ಎಂದು ತಿಳಿಸಿದರು. ಕಾನೂನು ಸಲಹೆಗಾರ ಕೊಂಬಾರನ ರೋಷನ್ ಮಾತನಾಡಿ, ಮಡಿಕೇರಿ ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆ ಸ್ಥಾಪಿಸುವ ಕುರಿತು ಜಿಲ್ಲಾಡಳಿತ ಮತ್ತು ಪ್ರಾಚ್ಯವಸ್ತು ಇಲಾಖೆಯ ಗಮನ ಸೆಳೆದು ಅಗತ್ಯ ಪ್ರಯತ್ನಗಳನ್ನು ನಡೆಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಕುಕ್ಕೇರ ಲಕ್ಷ್ಮಣ್ ಹಾಗೂ ಶಿಸ್ತು ಸಮಿತಿಯ ಅಧ್ಯಕ್ಷ ನವೀನ್ ದೇರಳ ಉಪಸ್ಥಿತರಿದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*