ಮಡಿಕೇರಿ ಡಿ.11 : ಕುಶಾಲನಗರದಲ್ಲಿ ವಿವಾಹ ಶಾಸ್ತ್ರ ನಡೆಯುತ್ತಿದ್ದ ಸಂದರ್ಭ ವಧುವಿನ ಕೊಠಡಿಯಿಂದ ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಪ್ರಕರಣವನ್ನು ಬೇಧಿಸಿರುವ ಕೊಡಗು ಜಿಲ್ಲಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಶಾಲನಗರ ಸಮೀಪದ ತೊರೆನೂರು ನಿವಾಸಿ ಚರಣ್ ಕುಮಾರ್(19), ಗೋಣಿಮರೂರು ಗ್ರಾಮದ ನಿವಾಸಿ ನಿತಿನ್ ಎಸ್.ಎಲ್.(22) ಹಾಗೂ ಅರಿಶಿನಕುಪ್ಪೆ ನಿವಾಸಿ ಮಿಥುನ್(24) ಎಂಬುವವರೇ ಬಂಧಿತ ಆರೋಪಿಗಳು.
ಕುಶಾಲನಗರದ ರೈತ ಭವನದಲ್ಲಿ ನ.28 ರಂದು ನಳಿನಿ ಎಂಬುವವರ ಮಗಳ ವಿವಾಹ ಶಾಸ್ತç ನಡೆಯುತಿತ್ತು. ಈ ಸಂದರ್ಭ ವಧುವಿನ ಕೊಠಡಿಯಲ್ಲಿದ್ದ 28 ಗ್ರಾಂ ಚಿನ್ನಾಭರಣ ಮತ್ತು 5 ಸಾವಿರ ರೂ. ನಗದು ಕಳವಾಗಿತ್ತು. ಈ ಬಗ್ಗೆ ನಳಿನಿ ಅವರು ನೀಡಿದ ದೂರನ್ನು ಆಧರಿಸಿ ಪೊಲೀಸರು ತನಿಖೆೆ ನಡೆಸಿ ಆರೋಪಿಗಳನ್ನು ಬಂಧಿಸಿದರು. ಮಾಲು ಸಹಿತ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ಪಿಐ ಪ್ರಕಾಶ್ ಬಿ.ಜಿ., ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ಪಿಎಸ್‌ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*