ಮಡಿಕೇರಿ NEWS DESK ಡಿ.12 : ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಿಸಿದ ವ್ಯಕ್ತಿಯನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿದ್ದ ಆರು ಗಂಟೆಗಳ ಕೊಡಗು ಬಂದ್ ಗೆ ಉತ್ತಮ ಸ್ಪಂದನೆ ದೊರೆತ್ತಿದೆ.
ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು, ಖಾಸಗಿ ಸಂಸ್ಥೆಗಳು, ವಾಣಿಜ್ಯ ಸಂಕೀರ್ಣಗಳು, ಹೊಟೇಲ್ ಸೇರಿದಂತೆ ವಿವಿಧ ವ್ಯಾಪಾರೋದ್ಯಮಗಳು ಬಂದ್ ಆಗಿವೆ. ಬೆರಳೆಣಿಕೆಯಷ್ಟು ಅಂಗಡಿ ಮತ್ತು ಹೊಟೇಲ್ ಗಳು ತೆರೆದಿದ್ದು, ಪೆಟ್ರೋಲ್ ಬಂಕ್ ಗಳು ಕಾರ್ಯನಿರ್ವಹಿಸುತ್ತಿವೆ. ವಾಹನಗಳ ಸಂಚಾರ ಮಾಮೂಲಿನಂತಿದೆ. ಸರಕಾರಿ ಬಸ್ ಗಳು ಸಂಚರಿಸುತ್ತಿದ್ದು, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಿದೆ. ಖಾಸಗಿ ವಾಹನಗಳ ಸಂಚಾರ ಎಂದಿನoತ್ತಿದೆ. ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ. ಶೇ.50 ರಷ್ಟು ಆಟೋರಿಕ್ಷಾಗಳು ಸಂಚರಿಸುತ್ತಿವೆ. ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ, ಸೋಮವಾರಪೇಟೆ, ನಾಪೋಕ್ಲು, ವಿರಾಜಪೇಟೆ, ಪೊನ್ನಂಪೇಟೆ, ಗೋಣಿಕೊಪ್ಪಲು ಮೊದಲಾದೆಡೆ ಬಂದ್ ಗೆ ಸ್ಪಂದನೆ ದೊರೆತ್ತಿದೆ. ಗುರುವಾರ ಬೆಳಿಗ್ಗೆ 6 ಗಂಟೆಯಿoದ ಮಧ್ಯಾಹ್ನ 12 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದ್ದು, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.