ನಾಪೋಕ್ಲು ಡಿ.12 NEWS DESK : ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ಶಾಲೆಯ ದಶಾ ದೇಚಮ್ಮ ಹಾಗೂ ಶಮಂತ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಸ್ಥಾಪಕ ಅಧ್ಯಕ್ಷ ಕುಟ್ಟಂಚೆಟ್ಟೀರ ಮಾದಪ್ಪ, ನಿರ್ದೇಶಕಿ ವಿದ್ಯಾ ಹಾಗೂ ಮುಖ್ಯ ಶಿಕ್ಷಕ ಚೋಕಿರ ತಮ್ಮಯ್ಯ ಪ್ರಶಸ್ತಿ ಪತ್ರ ವಿತರಿಸಿದರು.
ವರದಿ : ದುಗ್ಗಳ ಸದಾನಂದ.