ಮಡಿಕೇರಿ NEWS DESK ಡಿ.12 : ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್ಶಿಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ರಾಜ್ಯದ ಬುಲಂದಶಾಹರ್ ಜಿಲ್ಲೆಯ ಬೆಡ್ಶಿಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ ಮೋನು (26) ಬಂಧಿತ ಆರೋಪಿಗಳು. ಬಂಧಿತರಿ0ದ 550 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗಾಂಜಾವನ್ನು ಸರಬರಾಜು ಮಾಡುತಿದ್ದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ನಗರ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್‌ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಾದಕ ವಸ್ತುಗಳನ್ನು ಬಳಸುವ, ಸರಬರಾಜು ಮತ್ತು ಮಾರಾಟ ಮಾಡುವ ವ್ಯಕ್ತಿಗಳು ಕಂಡುಬ0ದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಕೆ.ಎಸ್.ಪಿ ತಂತ್ರಾಶದ ಮೂಲಕವೂ ತಿಳಿಸಬಹುದಾಗಿದ್ದು, ಮಾದಕ ವಸ್ತು ದಂಧೆ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಎಸ್‌ಪಿ ಮನವಿ ಮಾಡಿದ್ದಾರೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*