Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರು : ಡಿ.14 ರಂದು ಸಾವರ್ಕರ್ ಸಭಾಂಗಣ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು

*ಪುತ್ತೂರು : ಡಿ.14 ರಂದು ಸಾವರ್ಕರ್ ಸಭಾಂಗಣ ಉದ್ಘಾಟನೆ*

December 12, 20242 Mins Read
Share
Facebook Twitter LinkedIn Pinterest WhatsApp Email

ಪುತ್ತೂರು ಡಿ.12 NEWS DESK : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಹೊಸ ಸಭಾಂಗಣದ ಆವಶ್ಯಕತೆಯನ್ನು ಮನಗಂಡಂತಹ ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘವು ಸುಮಾರು 3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣವನ್ನು ನಿರ್ಮಿಸಿಕೊಟ್ಟಿದೆ. ಇದರ ಉದ್ಘಾಟನೆಯು ಡಿ.14 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ. 1 ಮಾರ್ಚ್ 1916 ರಲ್ಲಿ ಪ್ರಾರಂಭವಾದ ವಿವೇಕಾನಂದ ವಿದ್ಯಾವರ್ಧಕ ಸಂಘವು ಶಿಶುಮಂದಿರದಿಂದ ತೊಡಗಿ ಸ್ನಾತಕೋತ್ತರ ಶಿಕ್ಷಣ ಸಂಸ್ಥೆಯವರೆಗೆ ಒಟ್ಟು 78ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದೆ. ವಿದ್ಯಾಭಾರತಿಯ ಪರಿಕಲ್ಪನೆಯಂತೆ ತನ್ನೆಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳಲ್ಲಿ ಕರಾವಳಿ ಕರ್ನಾಟಕದ ಉತ್ತಮ ತಾಂತ್ರಿಕ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿರುವ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯೂ ಒಂದು. ಆರು ಪದವಿ ವಿಭಾಗಗಳು ಮತ್ತು ಎರಡು ಸ್ನಾಕೋತ್ತರ ವಿಭಾಗಗಳಲ್ಲಿ ಸುಮಾರು 2000 ವಿದ್ಯಾರ್ಥಿಗಳು ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ. ಇಲ್ಲಿ ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಅವಕಾಶವನ್ನು ನೀಡಲಾಗುತ್ತಿದ್ದು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಗೆ ಬೇಕಾದ ಎಲ್ಲಾ ಸವಲತ್ತನ್ನೂ ನೀಡಲಾಗುತ್ತದೆ. ಮಾತೃ ಸಂಸ್ಥೆಯ ಆಶಯಕ್ಕೆ ಅನುಸಾರವಾಗಿ ಇಲ್ಲಿ ಸಂಸ್ಕಾರಯುತ ಶಿಕ್ಷಣವನ್ನು ನೀಡಲಾಗುತ್ತದೆ. ಕಲಿತು ಹೊರಬಂದ ಪ್ರತಿಯೊಬ್ಬ ವಿದ್ಯಾರ್ಥಿಯು ಸಮಾಜಕ್ಕೆ ಒಳಿತನ್ನು ಮಾಡುವ ಪ್ರಜ್ಞಾವಂತ ನಾಗರಿಕ ಎನ್ನಿಸುವ ರೀತಿಯಲ್ಲಿ ರಾಷ್ಟ್ರಾಭಿಮಾನವನ್ನು ಬೆಳೆಸಲಾಗುತ್ತದೆ. ಇಲ್ಲಿನ ವಿದ್ಯಾರ್ಥಿಗಳು ಪ್ರತಿವರ್ಷವೂ ಉತ್ತಮ ಫಲಿತಾಂಶವನ್ನು ದಾಖಲಿಸುತ್ತಿದ್ದು ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ಪ್ರತಿಷ್ಟಿತ ಕಂಪೆನಿಗಳಲ್ಲಿ ಹುದ್ದೆಯನ್ನು ಗಳಿಸಿಕೊಳ್ಳುತ್ತಿದ್ದಾರೆ. ಡಿ.14 ರಂದು ಮಧ್ಯಾಹ್ನ 12 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಪುತ್ತೂರಿನ ಶಾಸಕರಾದ ಶ್ರೀ.ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಶ್ರೀ.ಟಿ.ಶ್ಯಾಮ್ ಭಟ್ IಂS. ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಸಲಹಾ ಸಮಿತಿಯ ಸದಸ್ಯ ಮತ್ತು ಸೇತುಭಂಧು- ಬ್ರಿಜ್‍ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಸಲಹಾ ಸಮಿತಿಯ ಇನ್ನೊರ್ವ ಸದಸ್ಯ ಸ್ವಿಸ್ ಸಿಂಗಾಪುರ ಓವರ್‍ಸೀಸ್ ಎಂಟರ್‍ಪ್ರೈಸಸ್ ಸಿಂಗಾಪುರ ಇದರ ಮಾಜಿ ಅಧ್ಯಕ್ಷರಾಗಿದ್ದ ಶ್ರೀ.ಚಂದ್ರಕಾಂತ್ ರಾವ್ ಐ ಅಭ್ಯಾಗತರಾಗಿ ಉಪಸ್ಥಿತರಿರುತ್ತಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ನಿರ್ದೇಶಕ ಶ್ರೀ.ಬಲರಾಮ ಆಚಾರ್ಯ.ಜಿ, ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ,ವಿಶ್ವಾಸ್ ಶೆಣೈ, ಸಂಚಾಲಕ ಶ್ರೀ.ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಶ್ರೀ.ಮುರಳೀಧರ ಭಟ್ ಮತ್ತು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿಸುತ್ತಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರು, ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರು, ಪುತ್ತೂರಿನ ಗಣ್ಯರು ಸಮಾರಂಭದಲ್ಲಿ ಭಾಗವಹಿಸುತ್ತಾರೆ.

Share. Facebook Twitter Pinterest LinkedIn Tumblr Email WhatsApp
Previous Article*ವೀರ ಸೇನಾನಿಗಳಿಗೆ ಅಗೌರವ : ಕಠಿಣ ಕ್ರಮಕ್ಕೆ ಬಾಳೆಲೆಯ ವಿವಿಧ ಸಂಘಟನೆಗಳಿಂದ ಆಗ್ರಹ*
Next Article *ಮೈಸೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸುಧಾರಿತ ಹೃದಯ ಆರೈಕೆ : TAVI ಮತ್ತು ಲೀಡ್‍ಲೆಸ್ ಪೇಸ್‍ಮೇಕರ್ ಅಳವಡಿಕೆ*

Related Posts

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ…

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.