
ಮಡಿಕೇರಿ ಡಿ.13 NEWS DESK : ಆನೆ ತುಳಿತಕ್ಕೆ ಒಳಗಾಗಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಕಟಗೇರಿ ಗ್ರಾಮದ ನಿವಾಸಿ ಕರ್ತಮಾಡ ಪೂವಣ್ಣ ಅವರ ಪತ್ನಿ ಶಾರದಾ ಅವರ ಆರೋಗ್ಯವನ್ನು ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ವಿಚಾರಿಸಿದರು. ನಗರದ ಜಿಲ್ಲಾಸ್ಪತ್ರೆಗೆ ಆಗಮಿಸಿದ ಅವರು, ವೈದ್ಯರಿಂದ ಮಹಿಳೆಯ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡು ಕುಟುಂಬಕ್ಕೆ ಸ್ಥೈರ್ಯ ತುಂಬಿದರು. ಸರ್ಕಾರದಿಂದ ತಕ್ಷಣವೇ ಆಸ್ಪತ್ರೆಯ ವೈದ್ಯಕೀಯ ವೆಚ್ಚ ಹಾಗೂ ಸಂತ್ರಸ್ತೆಗೆ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಡಿಸಿಎಫ್ ನೆಹರು ಮತ್ತು ಅರಣ್ಯ ಸಿಬ್ಬಂದಿ ಹಾಜರಿದ್ದರು.








