ಮಡಿಕೇರಿ ಡಿ.14 NEWS DESK : ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2024-25 ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವೆಬ್‍ಸೈಟ್ ವಿಳಾಸ https://ssp.postmatric.karnataka.gov.in ನಲ್ಲಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವೆಬ್‍ಸೈಟ್ ವಿಳಾಸ https://ssp.karnataka.gov.in ನಲ್ಲಿ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ- 9901482763, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-9482894676, ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-7259552655 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ತಿಳಿಸಿದ್ದಾರೆ.