ವಿರಾಜಪೇಟೆ ಡಿ.14 NEWS DESK : ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲಾ. ಕಾರ್ಮಿಕರ ಸಮಸ್ಯೆಗಳು ಇನ್ನೂ ಜೀವಂತವಾಗಿದೆ. ಸಮಸ್ಯೆಗಳಿ ಪರಿಹಾರ ಕಾಣಬೇಕು ಎನ್ನುವ ಮನೋಭಿಲಾಶೆಯಿಂದ ಸಿ.ಪಿ.ಐ.(ಮಾರ್ಕ್ಸ್‌ವಾದಿ) ಪಕ್ಷದ ವತಿಯಿಂದ ಡಿ.16 ಮತ್ತು 17 ರಂದು ವಿರಾಜಪೇಟೆಯಲ್ಲಿ ಜಿಲ್ಲಾ ಸಮ್ಮೇಳವನ್ನು ಆಯೋಜಿಸಲಾಗಿದೆ ಎಂದು ಪಕ್ಷದ ರಾಜ್ಯ ಸಮಿತಿ ಸದಸ್ಯ ಎಸ್.ವೈ.ಗುರುಶಾಂತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ದೊಡ್ಡಟ್ಟಿ ಚೌಕಿಯಲ್ಲಿರುವ ಪಕ್ಷದ ಶಾಖಾ ಕಚೇರಿಯಲ್ಲಿ 9ನೇ ಕೊಡಗು ಜಿಲ್ಲಾ ಸಮ್ಮೇಳನ ಮತ್ತು ಬಹಿರಂಗ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು. ಕೊಡಗಿನಲ್ಲಿ ನೆಲೆಸಿರುವ ಕಾರ್ಮಿಕರು ಇಂದಿಗೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆನೆ ಮಾನವ ಸಂಘರ್ಷ, ನಿರ್ಗತಿಕ ಕಾರ್ಮಿಕರಿಗೆ ಪುನರ್ ವಸತಿ, ನಿವೇಶನ, ರೈತರು ಎದುರಿಸುತ್ತಿರುವ ಕೃಷಿ ಪದ್ದತಿಗಳ ನೀತಿಗಳು, ಬೆಳೆ ಪರಿಹಾರ ಹೀಗೆ ಹಲವು ಸಮಸ್ಯೆಗಳಿಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ಬಹಿರಂಗ ಸಭೆ ಹಾಗೂ ಮೂರು ವರ್ಷಗಳಿಗೊಮ್ಮೆ ನಡೆಯುವ ಪ್ರತಿನಿಧಿಗಳ ಸಮಿತಿಗಳ ರಚನೆ ನಡೆಯಲಿದೆ ಎಂದರು. ಸಿ.ಪಿ.ಐ ಪಕ್ಷವು ಭ್ರಷ್ಟಾಚರ ರಹಿತವಾಗಿ ಪಾರದರ್ಶಕ ಆಡಳಿತ ನೀಡಲು ಮುಂದಾಗಿದೆ. ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚಲ್ಲುವ ಅಧಿವೇಶವಾಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್ ಮಾತನಾಡಿ, ಡಿ.16 ರಂದು ಸಮಾಜದ ವರೆಗೆ ಬೃಹತ್ ಜಾಥಾ ನಡೆಯಲಿದೆ. ನಂತರ ಸ್ವಾಗತ ಸಮಿತಿಯ ಅಧ್ಯಕ್ಷರಾದ ಐ.ಆರ್.ಪ್ರಮೋದ್ ಬಹಿರಂಗ ಅಧಿವೇಶನದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಡಿ.17 ರಂದು ಪ್ರತಿನಿಧಿ ಅಧಿವೇಶನ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಪಕ್ಷದ ರಾಜ್ಯ ಕಾರ್ಯದರ್ಶಿ, ಮಂಡಳಿಯ ಸದಸ್ಯರಾದ ಕೆ. ಯದವ್ ಶೆಟ್ಟಿ ಮತ್ತು ಎಸ್.ವೈ. ಗುರುಶಾಂತ್ ಉಪಸ್ಥಿತರಿರಲಿದ್ದಾರೆ. ಜಿಲ್ಲೆಯ ಎಲ್ಲಾ ಶಾಖೆಯ ಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷ (ಮಾಕ್ರ್ಸವಾದಿ) ಕೊಡಗು ಜಿಲ್ಲಾ ಸಮಿತಿಯ ಸದಸ್ಯರಾದ ಎ.ಸಿ.ಸಾಬು, ಪದ್ಮೀನಿ ಶ್ರೀಧರ್, ಕೆ.ಎಸ್. ರಮೇಶ್ ( ಶಾಜಿ) ಹಾಜರಿದ್ದರು.
ವರದಿ : ಕಿಶೋರ್ ಕುಮಾರ್ ಶೆಟ್ಟಿ