ಬೆಳಗಾವಿ ಡಿ.14 NEWS DESK : ಇಡೀ ದೇಶದಲ್ಲಿ ಕರ್ನಾಟಕವು ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಬೆಳಗಾವಿಯ ಸುವರ್ಣಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದೇ ಡಿಸೆಂಬರ್ 23, 24, 25 ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದೆ. ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. ಇದರಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದೆ. ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*