ಮಡಿಕೇರಿ ಡಿ.14 NEWS DESK : ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡದ ಮೇಲ್ಛಾವಣಿ ಕುಸಿದಿದ್ದು, ಅದನ್ನು ವಿಶೇಷ ಗ್ರಾಮ ಸಭೆಗೆ ಆಗಮಿಸಿದ್ದ ಕೋಡಿಮಣಿಯಂಡ ಶರಣ್ ಕುಟ್ಟಪ್ಪ ವೀಕ್ಷಿಸಿ, ಸಾಮಾಜಿಕ ಕಳಕಳಿಯಿಂದ ಸ್ವಂತ ಖರ್ಚಿನಲ್ಲಿ ಮೇಲ್ಛಾವಣಿ ದುರಸ್ಥಿ ಕಾರ್ಯವನ್ನು ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಶಾಲೆಯ ಮುಖ್ಯಶಿಕ್ಷಕರು, ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪದಾಧಿಕಾರಿಗಳು, ಸಾರ್ವಜನಿಕರು ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.