ನವದೆಹಲಿ NEWS DESK ಡಿ.15 : ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ (73) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಮೊದಲಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಜಾಕೀರ್ ಹುಸೇನ್ ಅವರು ತಬಲಾ ವಾದನದ ಮೂಲಕ ಕಲಾಭಿಮಾನಿಗಳ ಮನಸೂರೆಗೊಂಡಿದ್ದರು.