ಸುಂಟಿಕೊಪ್ಪ,ಡಿ.16 NEWS DESK : ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಶಾ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಎ.ಎಸ್.ಶ್ರೀಶಾ ಕಲಬುರ್ಗಿಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ಸಮಾವೇಶದಲ್ಲಿ ಯುವ ವಿಜ್ಞಾನಿಯಾಗಿ ಆಯ್ಕೆಯಾಗಿದ್ದು, ಜನವರಿಯಲ್ಲಿ ಮಧ್ಯ ಪ್ರದೇಶದ ಭೂಪಾಲ್‍ನಲ್ಲಿ ನಡೆಯುವ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾಳೆ.