ನಾಪೋಕ್ಲು ಡಿ.16 NEWS DESK : ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಧಾನ್ಯಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಗದ್ದೆಯಿಂದ ಭತ್ತದ ಕದಿರು ತಂದು ದೇವಾಲಯದ ನಮಸ್ಕಾರ ಮಂಟಪದಲ್ಲಿ ಇರಿಸಿ ಧಾನ್ಯಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮುಖ್ಯ ಅರ್ಚಕ ಸುಧೀರ್ ವಿಶೇಷ ಪೂಜೆ ನೆರವೇರಿಸಿ ತೀರ್ಥ ಪ್ರಸಾದ ಹಾಗೂ ಕದಿರನ್ನು ಭಕ್ತಾಧಿಗಳಿಗೆ ವಿತರಿಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನವರು, ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.