ನವದೆಹಲಿ NEWS DESK ಡಿ.16 : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ವಿಜಯ್ ದಿವಸ್ ಅಂಗವಾಗಿ ಇಂದು ಸೇನಾ ಮುಖ್ಯಸ್ಥರು ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.
ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ.ಸಿಂಗ್, ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಹಾಗೂ ನೌಕಾಪಡೆಯ ಉಪಾಧ್ಯಕ್ಷ ವೈಸ್-ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಹಾಜರಿದ್ದರು.