ವಿರಾಜಪೇಟೆ ಡಿ.17 NEWS DESK : ತ್ರಿವೇಣಿ ಶಾಲೆಯಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಎರಡನೇ ತರಗತಿಯ ಶ್ರೀನಿತ್ ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ, ಮೂರನೇ ತರಗತಿಯ ಶಿಖಾ ಮುತ್ತಮ್ಮ ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ಎರಡನೇ ತರಗತಿಯ ವಿ.ಆದ್ಯ ಭಕ್ತಿಗೀತೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ರವೀಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.