ಮಡಿಕೇರಿ ಡಿ.17 NEWS DESK : 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನ್ಯೂ ಇಂಡಿಯ ಅಶುರನ್ಸ್ ಕಂಪನಿ ಲಿಮಿಟೆಡ್ ತಿಳಿಸಿದೆ. 21 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು 2025 ರ ಜನವರಿ, 01 ರೊಳಗೆ ವೆಬ್‍ಸೈಟ್ ವಿಳಾಸ https://www.newindia.co.in/ ಕ್ಕೆ ಭೇಟಿ ನೀಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಡಿಸೆಂಬರ್, 27 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫ಼ೌಂಡೇಶನ್‌ನಲ್ಲಿ ಈ ನೇಮಕಾತಿ ಪರೀಕ್ಷೆ ಹಾಗೂ ವಿವಿಧ ಬ್ಯಾಂಕ್ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳ ಬಗ್ಗೆ ಉಚಿತ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಕೃಷಿಕ್ ಸರ್ವೋದಯ ಫ಼ೌಂಡೇಶನ್‌ನ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ತಿಳಿದ್ದಾರೆ.