*ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ಎಲ್ಲಾ ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಡಿ.20 ರಂದು ಬೆಳಿಗ್ಗೆ 10 ಗಂಟೆಗೆ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಬೃಹತ್ ಪ್ರತಿಭಟನಾ ಜಾಥ* ::: ಬೇಡಿಕೆಗಳು ::: *ಅವೈಜ್ಞಾನಿಕವಾಗಿ ಮಾಡಿರುವ ಸಿ & ಡಿ ಸರ್ವೆಯನ್ನು ರದ್ದುಗೊಳಿಸಿ, ಮರು ಸರ್ವೆ ಮಾಡಿ ರೈತರ ವ್ಯವಸಾಯ ಮಾಡಿರುವ ಭೂಮಿಯನ್ನು ರೈತರ ಹೆಸರಿಗೆ ಮಂಜೂರು ಮಾಡಬೇಕು. *ಯಾವುದೇ ಮಾಹಿತಿ ಇಲ್ಲದೆ ಮಾಡಿರುವ ಮೀಸಲು ಅರಣ್ಯ, ಸೆಕ್ಷನ್ 4/5 ಅನ್ನು ಕೈಬಿಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಸಿರು ನ್ಯಾಯಾಲಯಕ್ಕೆ ಒತ್ತಡ ಹಾಕಿ ಸ್ಥಳೀಯ ಜನರನ್ನು ಒಕ್ಕಲೆಬ್ಬಿಸುವುದನ್ನು ತಪ್ಪಿಸಬೇಕು. *ಅರಣ್ಯ ಹಾಗೂ ಕಂದಾಯ ಇಲಾಖೆಯವರು ವಾಸ್ತವತೆ ಅರಿಯದೆ ಮಾಡಿರುವ ಡೀಮ್ಸ್ ಫಾರೆಸ್ಟ್ ಕಾಯ್ದೆಯನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕು. *ಕಸ್ತೂರಿರಂಗನ್ ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಿರಸ್ಕರಿಸಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದ ಹಾಗೆ ಕೇರಳ ಮಾದರಿಯಂತೆ ಚಾರಿ ಮಾಡಬೇಕು. *ಊರುಉಡುವೆ, ದೇವರಕಾಡು, ಗೋಮಾಳ ಇವುಗಳನ್ನು ನಮ್ಮ ಪೂರ್ವಿಕರು ಊರಿನ ಹಿತದೃಷ್ಠಿಯಿಂದ ಮೀಸಲು ಮಾಡಿರುವ ಭೂಮಿಯಾಗಿದ್ದು, ಅದನ್ನು ಅರಣ್ಯ ಇಲಾಖೆಯ ಅಧೀನಕ್ಕೆ ಒಳಪಡಿಸದೆ, ಮೊದಲಿನಂತೆ ಗ್ರಾಮದ ಅಧೀನಕ್ಕೆ ಒಳಪಡಿಸಬೇಕು. *ಈ ಅವೈಜ್ಞಾನಿಕ ಅರಣ್ಯ ಕಾಯ್ದೆಯಿಂದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ 50, 53, 57 ಅರ್ಜಿಗಳಿಗೆ ಅನುಗುಣವಾಗಿ ರೈತರಿಗೆ ಯಾವುದೇ ಅಡೆತಡೆಗಳಿಲ್ಲದೆ ಹಕ್ಕು ಪತ್ರ ವಿತರಿಸಬೇಕು. *ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ ದುರಸ್ಥಿ ಕಡತಗಳನ್ನು ಆದಷ್ಟು ಬೇಗ ದುರಸ್ಥಿ ಮಾಡಿಕೊಡಬೇಕು. *ಬಡವರು ಕಟ್ಟಿರುವ ಮನೆಗಳಿಗೆ 94ಸಿ ಅನ್ನು ಮೊದಲಿನಂತೆ ದಾಖಲಾತಿ ವಿತರಿಸಬೇಕು. *ರೈತರಿಗೆ 10 ಹೆಚ್. ಪಿ. ಪಂಪ್ ಸೆಟ್‌ಗೆ ಉಚಿತ ವಿದ್ಯುತ್ ನೀಡಬೇಕು. *ಮಾನವ ಹಾಗೂ ವನ್ಯಜೀವಿಗಳ ಸಂಘರ್ಷದಲ್ಲಿ ನಮ್ಮ ಬದುಕುವ ಹಕ್ಕನ್ನು ಅರಣ್ಯ ಇಲಾಖೆಯ ಮೂಲಕ ಕಸಿದುಕೊಳ್ಳಬಾರದು. ಕೊಡಗಿನ ಸರ್ವ ರೈತರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸುವಂತೆ ಮನವಿ >> ಸುರೇಶ್ ಚಕ್ರವರ್ತಿ, ಅಧ್ಯಕ್ಷರು, ರೈತ ಹೋರಾಟ ಸಮಿತಿ 9448433294)
Breaking News
- *ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ*
- *ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ಎಲ್ಲಾ ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಡಿ.20 ರಂದು ಬೃಹತ್ ಪ್ರತಿಭಟನಾ ಜಾಥ*
- *ನ್ಯೂ ಇಂಡಿಯ ಅಶುರನ್ಸ್ ಕಂಪನಿ : 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ*
- *ಕೊಡಗು : ಮಕ್ಕಳಿಗೆ ಮಾನವೀಯ ಹಾಗೂ ಮೌಲ್ಯಯುತ ಶಿಕ್ಷಣ ನೀಡಿ ಮಕ್ಕಳ ಹಕ್ಕು ಸಂರಕ್ಷಿಸಿ : ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಸಲಹೆ*
- *ಕ್ಷೇತ್ರದ ಅಭಿವೃದ್ಧಿ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ಶಾಸಕ ಡಾ.ಮಂತರ್ ಗೌಡ*
- *ಕೂಡಿಗೆ ಸಹಕಾರ ಸಂಘದಲ್ಲಿ ರೈತರಿಗೆ ಮಾಹಿತಿ ಕಾರ್ಯಾಗಾರ*
- *ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಸಭೆ*
- *ಕರಾಟೆ ಪಂದ್ಯಾವಳಿ : ಭಾಗಮಂಡಲ ಮತ್ತು ಮೈಸೂರು ತಂಡ ಚಾಂಪಿಯನ್*
- *ಕಾವೇರಿ ಕಾರ್ನಿವಲ್ : ವಿರಾಜಪೇಟೆಯ ಕಾವೇರಿ ಶಾಲೆಗೆ ಚಾಂಪಿಯನ್ಪಟ್ಟ*
- *ಪುತ್ತರಿ ನಮ್ಮೆ : ಶ್ರೀಮಂಗಲ ಶ್ರೀ ಭಗವತಿ ದೇವಾಲಯದಲ್ಲಿ ದುಡಿಕೊಟ್ಟ್ ಪಾಟ್*