ಸಿದ್ದಾಪುರ ಡಿ.18 NEWS DESK : ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಮುತ್ತಪ್ಪನ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು. ರಾತ್ರಿ ದೇವಾಲಯದ ಗದ್ದೆಯಿಂದ ಧಾನ್ಯಲಕ್ಷ್ಮಿಯ ಕದಿರು ತೆಗೆದು ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಹಂಚಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಅನ್ನ ಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ದೇವಾಲಯದ ಅಧ್ಯಕ್ಷ ಪಾಲಚಂಡ ಚೀಯಣ್ಣ, ಕಾರ್ಯದರ್ಶಿ ರಾಜನ್, ಉಪಾಧ್ಯಕ್ಷ ದಾಸನ್, ಎಸ್‌ಎನ್‌ಡಿಪಿ ಅಧ್ಯಕ್ಷ ವಿ.ಕೆ.ಲೋಕೇಶ್, ಮಾಜಿ ಕಾರ್ಯದರ್ಶಿ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.