
ಜಮ್ಮು NEWS DESK ಡಿ.18 : ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಥುವಾ ಜಿಲ್ಲೆಯ ಶಿವನಗರ ಪ್ರದೇಶದ ಮನೆಯೊಂದರಲ್ಲಿ ಇದ್ದವರು ಮಲಗಿದ್ದಾಗ ದಟ್ಟ ಹೊಗೆ ತುಂಬಿಕೊoಡು, ಮನೆಯೊಳಗೆ ಬೆಂಕಿ ಕಾಣಿಸಿಕೊಂಡಿದೆ. ನಸುಕಿನ ಜಾವ 2.30ರ ಸುಮಾರಿಗೆ ಈ ಅಗ್ನಿ ಅವಘಡ ನಡೆದಿದೆ.











