ಮಡಿಕೇರಿ NEWS DESK ಡಿ.18 : ಸಂಪೂರ್ಣವಾಗಿ ಹದಗೆಟ್ಟಿರುವ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ರಸ್ತೆಯನ್ನು ಡಾಂಬರೀಕರಣಗೊಳಿಸಬೇಕೆAದು ಒತ್ತಾಯಿಸಿ ಗಾಳಿಬೀಡು, ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ ಹಾಗೂ ಹೆಬ್ಬೆಟ್ಟಗೇರಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮೂರನೇ ಮೈಲು ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬಂದು ಲಿಖಿತ ಭರವಸೆ ನೀಡುವಲ್ಲಿಯವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು. ಗಾಳಿಬೀಡು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಳೆದ ಹಲವು ವರ್ಷಗಳಿಂದ ಡಾಂಬರೀಕರಣವಾಗಿಲ್ಲ. ಹೊಂಡ ಗುಂಡಿಗಳಿoದ ಕೂಡಿರುವ ರಸ್ತೆಗೆ ತೇಪೆ ಹಾಕುವ ಕಾರ್ಯ ಮಾತ್ರ ನಡೆಯುತ್ತಿದೆ. ಈಗಲೂ ತೇಪೆ ಹಾಕುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದು, ಇದನ್ನು ಗ್ರಾಮಸ್ಥರು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು. ಹದಗೆಟ್ಟ ರಸ್ತೆ ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ, ಹೆಬ್ಬೆಟ್ಟಗೇರಿ, ಪ್ರಾಕೃತಿಕ ವಿಕೋಪದ ನೆರೆ ಸಂತ್ರಸ್ಥರ ಮನೆಗಳಿಗೆ ಹಾಗೂ ಮಡಿಕೇರಿ ನಗರವನ್ನು ಸಂಪರ್ಕಿಸುವ ರಸ್ತೆಯಾಗಿದೆ. ಈ ಭಾಗದಲ್ಲೇ ಜನಪ್ರಿಯ ಪ್ರವಾಸಿತಾಣ ಮಾಂದಲ್ ಪಟ್ಟಿ ಮತ್ತು ಹಲವು ಪ್ರತಿಷ್ಠಿತ ರೆಸಾರ್ಟ್ಗಳಿವೆ. ನಿತ್ಯ ಸಾವಿರಾರು ವಾಹನಗಳ ಸಂಚಾರವಿದ್ದರೂ ಹಾಗೂ ಪ್ರವಾಸೋದ್ಯಮದ ಮೂಲಕ ಸರ್ಕಾರಕ್ಕೆ ಹೆಚ್ಚು ಆದಾಯ ಸಂದಾಯವಾಗುತ್ತಿದ್ದರೂ ಹೊಂಡಗುAಡಿಗಳಿAದ ಕೂಡಿರುವ ರಸ್ತೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಶಾಸಕರಾದಿಯಾಗಿ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆದಿದ್ದರೂ ಇಲ್ಲಿಯವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಹೊಂಡ, ಗುಂಡಿಗಳಲ್ಲಿ ರಸ್ತೆಯನ್ನು ಹುಡುಕಬೇಕಾದ ಪರಿಸ್ಥಿತಿ ಇದ್ದರೂ ತೇಪೆ ಕಾರ್ಯಕ್ಕೆ ಮುಂದಾಗಿರುವುದು ಖಂಡನೀಯ ಮತ್ತು ಇದನ್ನು ಈ ಭಾಗದ ಎಲ್ಲಾ ಗ್ರಾಮಸ್ಥರು ವಿರೋಧಿಸುತ್ತೇವೆ. ರಸ್ತೆಯನ್ನು ಸಂಪೂರ್ಣವಾಗಿ ಡಾಂಬರೀಕರಣ ಮಾಡಬೇಕು ಮತ್ತು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ವಿವಿಧ ಗ್ರಾಮಗಳ ಪ್ರಮುಖರಾದ ಪಾಂಡೀರ ಸುಬ್ರಮಣಿ, ಹರೀಶ ರೈ, ಶಿವಪ್ರಸಾದ್ ರೈ, ನವೀನ್ ದೇರಳ, ಯು.ಎಸ್.ಗಿರೀಶ್, ಯಾಲದಾಳು ರಾಜಶೇಖರ, ಡೀನ್ ಬೋಪಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಸಾಂಸ್ಕೃತಿಕ ಮೇಳ : ಕಾವೇರಿ ಶಾಲೆಗೆ ಸಮಗ್ರ ಪ್ರಶಸ್ತಿ*
- *ಕೂತಿ ಗ್ರಾಮದ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರಿಂದಲೇ ಶ್ರಮದಾನ*
- *ಕೊಡಗಿನ ಸೈನಿಕ ಶಾಲೆಯಲ್ಲಿ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ : ಸುಬ್ರೊಟೊ ನಿಲಯ ಚಾಂಪಿಯನ್*
- *ಕಾವೇರಿ ಶಾಲೆಯಲ್ಲಿ ಪುತ್ತರಿ ಹಬ್ಬದ ಸಂಭ್ರಮ*
- *ನಾಪೋಕ್ಲು ಶ್ರೀ ಪೊನ್ನು ಮುತ್ತಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಪುತ್ತರಿ ವೆಳ್ಳಾಟಂ*
- *ಐತಿಹಾಸಿಕ ಬಿದ್ದಾಟಂಡ ವಾಡೆ, ನೂರಂಬಾಡ ನಾಡ್ ಮಂದ್ನಲ್ಲಿ ಪುತ್ತರಿ ಕೋಲಾಟ*
- *ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಸಂಭ್ರಮ*
- *ಮೈಸೂರು ಗೌಡ ಸಮಾಜದಲ್ಲಿ ಹುತ್ತರಿ ಸಂಭ್ರಮ*
- *ಚೆಟ್ಟಳ್ಳಿಯಲ್ಲಿ ಗಮನ ಸೆಳೆದ ಪುತ್ತರಿನಮ್ಮೆರ ಊರೊರ್ಮೆ ಕೂಟ : ಕೊಡವ ಸಂಸ್ಕೃತಿಯ ಅನಾವರಣ*
- *ರಸ್ತೆ ಡಾಂಬರೀಕರಣಕ್ಕಾಗಿ ಒತ್ತಾಯಿಸಿ ಗಾಳಿಬೀಡು ಗ್ರಾಮಸ್ಥರಿಂದ ಪ್ರತಿಭಟನೆ*