ಮಡಿಕೇರಿ ಡಿ.18 NEWS DESK : ಕಾಡುಕೋಣ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನಯ್ಯಕೋಟೆ ಗ್ರಾಮದ ಆಬ್ಬೂರು ಎಂಬಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ರಾಜು.ಜೆ (52) ಹಾಗೂ ಬೋಜಿ ಜೆ.ಟಿ (48) ಗಾಯಗೊಂಡವರು. ಎಂದಿನಂತೆ ತೋಟದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಜಿ ಹಾಗೂ ರಾಜು ಮೇಲೆ ಕಾಡುಕೋಣ ಏಕಾಏಕಿ ದಾಳಿ ಮಾಡಿದೆ. ಗಾಯಾಳುಗಳನ್ನು ಪಾಲಿಬೆಟ್ಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಚೆನ್ನವೀರೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.