ಮಡಿಕೇರಿ ಡಿ.18 NEWS DESK : ಅರಕಲಗೂಡು ನೋಡಲ್ ಕೇಂದ್ರ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ಯಸಳೂರು ಹಾಗೂ ಶನಿವಾರಸಂತೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕೈಗೊಳ್ಳಲು ಉದ್ದೇಶಿಸಿದ್ದು, ಈ ದಿನದಂದು ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಹೋಗುವ 11 ಕೆವಿ ಗ್ರಾಮಾಂತರ ಮತ್ತು ಐಪಿ ಮಾರ್ಗಗಳಿಗೆ ಡಿಸೆಂಬರ್, 19 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆದ್ದರಿಂದ ಶನಿವಾರಸಂತೆ, ಹಂಡ್ಲಿ, ಗೌಡಳ್ಳಿ, ಶುಂಠಿ, ಮಾದ್ರೆ, ಮಾದ್ರವಳ್ಳಿ, ಬಿಳಹ, ದುಂಡಳ್ಳಿ, ಬೆಸೂರು, ಕಟ್ಟೆಪುರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಪೊನ್ನಂಪೇಟೆ :: ಪೊನ್ನಂಪೇಟೆ 66/11 ಕೆವಿ ಹಾಗೂ ಶ್ರೀಮಂಗಲ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಡಿಸೆಂಬರ್, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿನ ವಿದ್ಯುತ್ ಮಾರ್ಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗೋಣಿಕೊಪ್ಪ, ಪೊನ್ನಂಪೇಟೆ, ತಿತಿಮತಿ, ದೇವರಪುರ, ಮಾಯಮುಡಿ, ಪಾಲಿಬೆಟ್ಟ, ಕುಂದ, ಕಿರಗೂರು, ಹಾತೂರು, ಕಳತ್ಮಾಡು, ಹೊಸೂರು, ಬಾಳೆಲೆ, ದೇವನೂರು, ಕಾನೂರು, ಹುದಿಕೇರಿ, ಶ್ರೀಮಂಗಲ, ಕುಟ್ಟ, ಬಿರುನಾಣಿ, ಬೀರುಗ, ನಾಲ್ಕೇರಿ, ಟಿ.ಶೆಟ್ಟಿಗೇರಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.