Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕುಶಾಲನಗರದಲ್ಲಿ 21, 22 ರಂದು ಕೊಡಗು ಜಿಲ್ಲಾ ಮಟ್ಟದ‌ ಮಕ್ಕಳ ರ್‍ಯಾಲಿ*
ಇತ್ತೀಚಿನ ಸುದ್ದಿಗಳು

*ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕುಶಾಲನಗರದಲ್ಲಿ 21, 22 ರಂದು ಕೊಡಗು ಜಿಲ್ಲಾ ಮಟ್ಟದ‌ ಮಕ್ಕಳ ರ್‍ಯಾಲಿ*

December 18, 20243 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ NEWS DESK ಡಿ.18 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ  ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ  ಡಿ.21 ಮತ್ತು 22 ರಂದು ( ಶನಿವಾರ ಮತ್ತು ಭಾನುವಾರದಂದು ) ಎರಡು ದಿನಗಳ ಕಾಲ ಕುಶಾಲನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ “*ರಾಷ್ಟ್ರೀಯ ಭಾವೈಕ್ಯತೆ ಬೆಸುಗೆ ಹಾಗೂ ಸ್ವಚ್ಛತೆಯೇ ಸೇವೆ*”ಎಂಬ ಧ್ಯೇಯ ವಾಕ್ಯದೊಂದಿಗೆ ಕೊಡಗು ಜಿಲ್ಲಾಮಟ್ಟದ‌ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ  ರ್‍ಯಾಲಿ ಏರ್ಪಡಿಸಲಾಗಿದೆ. ಕುಶಾಲನಗರ ಪತ್ರಕರ್ತರ ಸಂಘದಲ್ಲಿ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಕ್ಕಳ  ರ್‍ಯಾಲಿ ಕುರಿತು ಮಾಹಿತಿ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಡಿ.21 ರಂದು ಶನಿವಾರ ಮಧ್ಯಾಹ್ನ 2.00 ಗಂಟೆಗೆ  ನಡೆಯಲಿರುವ ಮಕ್ಕಳ ರ್‍ಯಾಲಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತರಾದ  ಪಿ.ಜಿ.ಆರ್.ಸಿಂಧ್ಯ ಸರ್ ಚಾಲನೆ ನೀಡಲಿದ್ದಾರೆ. ಮಕ್ಕಳ ರ್ಯಾಲಿಯ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ತಹಶೀಲ್ದಾರ್ ಕಿರಣ್ ಗೌರಯ್ಯ, ಪುರಸಭೆಯ ಅಧ್ಯಕ್ಷೆ ಜಯಲಕ್ಷ್ಮಿ, ಡಿಡಿಪಿಐ ಸಿ.ರಂಗಧಾಮಪ್ಪ, ಕೂಡಿಗೆ ಡಯಟ್ ಪ್ರಾಂಶುಪಾಲ ಎಂ.ಚಂದ್ರಕಾಂತ್,  ಬಿಇಓ ಎಸ್.ಭಾಗ್ಯಮ್ಮ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತಿತರ ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.     ಮಕ್ಕಳ ರ್‍ಯಾಲಿಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಕ್ಷಕರು ಸೇರಿದಂತೆ ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ 700 ಮಕ್ಕಳು ಭಾಗವಹಿಸಲಿದ್ದಾರೆ.  ರ್‍ಯಾಲಿ ಅಂಗವಾಗಿ ಮಕ್ಕಳಿಗೆ ಎರಡು ದಿನಗಳ ಕಾಲ ವಸತಿ ಸೌಕರ್ಯದೊಂದಿಗೆ ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.       ಕುಶಾಲನಗರ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾಗಲಿರುವ ಮಕ್ಕಳ ಬೃಹತ್ ರ್‍ಯಾಲಿಯಲ್ಲಿ ಮಕ್ಕಳು ರಾಷ್ಟ್ರಪ್ರೇಮ, ರಾಷ್ಟ್ರೀಯ ಭಾವೈಕ್ಯತೆ, ಸಮುದಾಯದ ಸಹಬಾಳ್ವೆ, ಸೌಹಾರ್ದತೆ ಬೆಳೆಸುವುದು ಸೇರಿದಂತೆ ನೆಲ- ಜಲ, ಪರಿಸರ, ಅರಣ್ಯ ಸಂರಕ್ಷಣೆ, ಸ್ವಚ್ಛತೆ, ಆಹಾರ ಸಂರಕ್ಷಣೆ ಮತ್ತಿತರ ಪ್ರಮುಖ ಧ್ಯೇಯಗಳೊಂದಿಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಲಿದ್ದಾರೆ . ರ್ಯಲಿಯ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಲಾಗುವುದು . ನಂತರ ರಾತ್ರಿ ಮಕ್ಕಳಿಂದ ಶಿಬಿರಾಗ್ನಿ ನಡೆಸಲಾಗುವುದು. ಡಿ.22 ರಂದು ದೈಹಿಕ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಡಾ ಸದಾಶಿವಯ್ಯ ಎಸ್.ಪಲ್ಲೇದ್ ಅವರ ನೇತೃತ್ವದಲ್ಲಿ ಗ್ರಾಮೀಣ ಕ್ರೀಡಾಕೂಟ ನಡೆಸಲಾಗುವುದು. ಡಿ.22 ರಂದು ಅಪರಾಹ್ನ 2.00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಇದೇ ವೇಳೆಯಲ್ಲಿ ಸ್ಕೌಟ್ಸ್, ಗೈಡ್ಸ್ ನಲ್ಲಿ ಉತ್ತಮ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಬೇಬಿಮ್ಯಾಥ್ಯೂ ರ್ಯಾಲಿಯ ಮಾಹಿತಿ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಕುಶಾಲನಗರದಲ್ಲಿ ಇದೇ ಮೊದಲ ಬಾರಿ ನಡೆಯುತ್ತಿರುವ ಮಕ್ಕಳ ರ್‍ಯಾಲಿಯನ್ನು ಯಶಸ್ವಿಯಾಗಿ ಸಂಘಟಿಸಲು ಶಿಕ್ಷಣ ಇಲಾಖೆ ಸೇರಿದಂತೆ ಸ್ಥಳೀಯ ಜನಪ್ರತಿಗಳು, ಸ್ಥಳೀಯ ದಾನಿಗಳು ಹಾಗೂ ನಾಗರಿಕರು ಉತ್ತಮ ಸ್ಪಂದನೆ ದೊರೆತಿದೆ.  ಮಕ್ಕಳಿಗೆ ವಸತಿ ಸೌಲಭ್ಯದೊಂದಿಗೆ  ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗುವುದು. ಈ ರ್‍ಯಾಲಿಯನ್ನು ವ್ಯವಸ್ಥಿತವಾಗಿ ಸಂಘಟಿಸಲು ಶಿಕ್ಷಣ ಇಲಾಖೆ ಮತ್ತು ಪುರಸಭೆಯ ವತಿಯಿಂದ ಉತ್ತಮ ಪ್ರೋತ್ಸಾಹ ನೀಡುತ್ತಿದ್ದು, ರ್ಯಾಲಿಯ ಯಶಸ್ವಿ ಸಂಘಟನೆಗೆ ನಾಗರಿಕರಿಂದ ಹೆಚ್ಚಿನ   ಸಹಕಾರವನ್ನು ನಿರೀಕ್ಷಿಸಲಾಗಿದೆ ಎಂದರು. ಶಾಲಾ ಮಕ್ಕಳಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ ಹಾಗೂ ಸಾಮಾಜಿಕ ಮೌಲ್ಯಗಳನ್ನು  ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದು ಡಾ ಪ್ರವೀಣ್ ತಿಳಿಸಿದರು. ಮಕ್ಕಳ ರ್ಯಾಲಿ (ರ್‍ಯಾಲಿ)ಯ ರೂಪುರೇಷೆಗಳ ಕುರಿತು ಮಾಹಿತಿ ನೀಡಿದ ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ, ಶಿಬಿರದಲ್ಲಿ ಡಿ.22 ರಂದು ಬೆಳಿಗ್ಗೆ 7.00 ಗಂಟೆಯಿಂದ ಮಕ್ಕಳಿಗೆ ಬೇಡನ್ ಪೊವೆಲ್ -6  (ಬಿ.ಪಿ.6 )  ನ ವ್ಯಾಯಾಮ ನಡೆಸಲಾಗುವುದು. ನಂತರ ಮಕ್ಕಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಮಹತ್ವ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಗ್ರಾಮೀಣ ಕ್ರೀಡಾಕೂಟದಲ್ಲಿ ಮಕ್ಕಳಿಗೆ ವಿವಿಧ ಜಾನಪದ ಕ್ರೀಡೆಗಳನ್ನು ಹಮ್ಮಿಕೊಂಡು ಅವರಿಗೆ ಈ ಕ್ರೀಡೆಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು. ಗೋಷ್ಠಿಯಲ್ಲಿ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಕೋಶಾಧಿಕಾರಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಕುಶಾಲನಗರ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ಅರುಣ್, ಕಾರ್ಯದರ್ಶಿ  ಎಂ.ಎಸ್.ಗಣೇಶ್, ಜಿಲ್ಲಾ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ,  ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಡಿ.19 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
Next Article *ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.