
ಶ್ರೀನಗರ NEWS DESK ಡಿ.19 : ಸೈನಿಕರ ಮೇಲೆ ಗುಂಡಿನ ದಾಳಿ ಮಾಡಿದ ಐವರು ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಸೇನಾಪಡೆ ಗುರುವಾರ ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಇಬ್ಬರು ಯೋಧರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರು ಇರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿದರು. ಉಗ್ರರು ಅಡಗಿ ಕುಳಿತಿದ್ದ ಸ್ಥಳದತ್ತ ಭದ್ರತಾ ಪಡೆಗಳು ತಲುಪುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಈ ಸಂದರ್ಭ ದಿಟ್ಟ ಉತ್ತರ ನೀಡಿದ ಭಾರತೀಯ ಸೈನಿಕರು ಐವರು ಉಗ್ರರನ್ನು ಹತ್ಯೆ ಮಾಡಿದರು.











