ಮಡಿಕೇರಿ ಡಿ.19 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆದಮುಳ್ಳೂರು-ಕಡಂಗ ಭಾಗದ ರಸ್ತೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಭಾಗದ ಜನರ ಹಾಗೂ ವಾಹನ ಸವಾರರ ಬೇಡಿಕೆಗೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಾರಿಯ ಅಧಿಕ ಮಳೆಯಿಂದಾಗಿ ತೀವ್ರ ಹಾನಿಗೊಳಗಾಗಿದ್ದ ರಸ್ತೆಯ ದುರಸ್ತಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರು ವಿಶೇಷ ಅನುದಾನ ನೀಡಿದ್ದರು. ಮಳೆ ಕಡಿಮೆ ಆಗಿರುವುದರಿಂದ ರಸ್ತೆ ದುರಸ್ತಿ ಕಾಮಗಾರಿಯನ್ನು ಈಗ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಗುಣಮಟ್ಟದ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.