ಮಡಿಕೇರಿ ಡಿ.19 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತ ಹೋರಾಟ ಸಮಿತಿ, ರೈತ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳು ಡಿ.20 ರಂದು ನಡೆಸುತ್ತಿರುವ ಪ್ರತಿಭಟನೆಗೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್ ನ ನಗರಾಧ್ಯಕ್ಷ ಸಂತೋಷ್ ಅನ್ವೇಕರ್ ಅವರು, ರೈತರು ದೇಶದ ಬೆನ್ನೆಲುಬಾಗಿದ್ದಾರೆ, ಅಲ್ಲದೆ ವ್ಯಾಪಾರಸ್ಥರ ಬಲವಾಗಿದ್ದಾರೆ. ಆದ್ದರಿಂದ ಶುಕ್ರವಾರ ಮಡಿಕೇರಿಯಲ್ಲಿ ನಡೆಯುವ ರೈತರ ಹೋರಾಟಕ್ಕೆ ಚೇಂಬರ್ ಆಫ್ ಕಾಮರ್ಸ್ ನ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಬೆಂಬಲ ಸೂಚಿಸಿ ಉದ್ಯಮಿಗಳು ಹಾಗೂ ವರ್ತಕರು ಕೈಜೋಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.