Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನೆಲ್ಲಿಹುದಿಕೇರಿ ಕೆಪಿಎಸ್ ಶಾಲೆಯಲ್ಲಿ ವಚನ ಗಾಯನ ಕಾರ್ಯಕ್ರಮ : ಎಲ್ಲಾ ಧರ್ಮಗಳ ಸಾರ ದಯೆ ಹಾಗೂ ಮಾನವೀಯತೆ : ಸಾಹಿತಿ ಭಾರಧ್ವಜ್ ಆನಂದತೀರ್ಥ*
ಇತ್ತೀಚಿನ ಸುದ್ದಿಗಳು

*ನೆಲ್ಲಿಹುದಿಕೇರಿ ಕೆಪಿಎಸ್ ಶಾಲೆಯಲ್ಲಿ ವಚನ ಗಾಯನ ಕಾರ್ಯಕ್ರಮ : ಎಲ್ಲಾ ಧರ್ಮಗಳ ಸಾರ ದಯೆ ಹಾಗೂ ಮಾನವೀಯತೆ : ಸಾಹಿತಿ ಭಾರಧ್ವಜ್ ಆನಂದತೀರ್ಥ*

December 19, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸಿದ್ದಾಪುರ ಡಿ.19 NEWS DESK : ಭೂಮಿಯ ಮೇಲಿನ ಸಕಲ ಜೀವಿಗಳಿಗೂ ಬದುಕುವ ಸಮಾನ ಹಕ್ಕನ್ನು ಪ್ರತಿಪಾದಿಸಿದ ಶರಣರು ದಯೆಯನ್ನು ಧರ್ಮದ ಮೂಲವಾಗಿಸಿದರು. ಜೊತೆಗೆ ಎಲ್ಲಾ ಧರ್ಮಗಳ ಸಾರವೂ ಇದೇ ಆಗಿದೆ ಎಂದು ಸಾಹಿತಿ ಕಣಿವೆ ಭಾರಧ್ವಜ್ ಆನಂದತೀರ್ಥ ಹೇಳಿದರು.
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ನೆಲ್ಲಿಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಚನ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಾಣಿ ಪಕ್ಷಿಗಳೊಂದಿಗಿನ ಜೀವರಾಶಿಗಳು ಹಾಗೂ ಮನುಷ್ಯನ ಜೀವ ಒಂದೇ. ಯಾವ ಕಾರಣಕ್ಕೂ ಅನಗತ್ಯವಾಗಿ ಹರಣವಾಗಬಾರದು ಎಂಬ ಸದುದ್ದೇಶದಿಂದ ಬಸವಾದಿ ಶರಣರು, ಕಲಬೇಡ ಕೊಲಬೇಡ ಎಂಬ ವಚನದ ಮೂಲಕ ಮನುಷ್ಯನ ಸುಂದರ ಬದುಕಿಗೆ ಅಗತ್ಯವಿರುವ ದೀವಿಗೆ ಹಚ್ಚಿದ್ದಾರೆ. ಹಾಗೆಯೇ ಇಸ್ಲಾಂ, ಕ್ರೈಸ್ತ , ಬೌದ್ಧ ಮೊದಲಾದ ಎಲ್ಲಾ ಧರ್ಮಗಳು ಕೂಡ ಅದೇ ಸಂದೇಶ ಸಾರಿವೆ.
ಆದರೆ ನಾವು ಅವುಗಳನ್ನು ಅರಿಯುವಲ್ಲಿ ಹಾಗೂ ಪಾಲನೆ ಮಾಡುವಲ್ಲಿ ಎಡವಿದ್ದೇವೆ. ಹಾಗಾಗಿ ಸಂಕೋಲೆಗಳಲ್ಲಿ ಸಿಲುಕಿದ್ದೇವೆ ಎಂದು ಭಾರಧ್ವಜ್ ವಿಷಾದಿಸಿದರು. “ಸಾಂಸ್ಕೃತಿಕ ನಾಯಕ ಬಸವಣ್ಣ ” ವಿಚಾರದ ಕುರಿತು ಪ್ತವಚನ ನೀಡಿದ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಮೆ.ನಾ.ವೆಂಕಟನಾಯಕ್, ಹನ್ನೆರಡನೇ ಶತಮಾನದಲ್ಲಿನ ಬಸವಾದಿ ಶರಣರು ಇಡೀ ಮನು ಕುಲಕ್ಕೆ ಅಗತ್ಯವಿರುವ ಜೀವನ ಮೌಲ್ಯಗಳನ್ನು ವಚನಗಳಲ್ಲಿ ಸಾರಿ ಹೋಗಿದ್ದಾರೆ. ಆದರೆ ಅತಿಯಾಸೆಯ ಮಾನವ ಅವುಗಳನ್ನು ಅರಿಯುವಲ್ಲಿ ವಿಫಲನಾಗಿದ್ದಾನೆ. ಹಾಗಾಗಿ ಸಮಾಜದಲ್ಲಿ ನಿತ್ಯವೂ ಮೋಸ, ವಂಚನೆ, ದ್ವೇಷ, ದರೋಡೆ, ಕೊಲೆ – ಸುಲಿಗೆಗಳು ಘಟಿಸುತ್ತಿವೆ. ಒಳ್ಳೆಯ ಮಾತುಗಳು, ನಡೆ ಹಾಗೂ ನುಡಿ, ಸತ್ಯ ಶುದ್ಧ ಕಾಯಕ ಶರಣರ ಧ್ಯೇಯವಾಗಿತ್ತು.
ಅಸಮಾನತೆ, ವರ್ಗ ಹಾಗೂ ವರ್ಣ ಸಂಘರ್ಷಗಳನ್ನು ತೊಡೆಯಲು ಶರಣರು ಮಾಡಿದ ಕ್ರಾಂತಿ ಅನನ್ಯವಾದುದು ಎಂದು ಬಸವಾದಿ ಶರಣ ಶರಣೆಯರ ವಚನಗಳ ಸಾರವನ್ನು ವಿದ್ಯಾರ್ಥಿಗಳಿಗೆ ವೆಂಕಟನಾಯಕ್ ಮನದಟ್ಟು ಮಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೊಹಮ್ಮದ್ ಮುಸ್ತಾಫ ಮಾತನಾಡಿ, ಶರಣರ ಸಂದೇಶಗಳ ಪಾಲನೆಯಿಂದ ಆದರ್ಶ ಸಮಾಜ ಸಾಧ್ಯವಿದೆ ಎಂದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು. ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ ಭಕ್ತ ಹಾಗೂ ಶಾಲೆಯ ಹಲವು ವಿದ್ಯಾರ್ಥಿಗಳು ಬಸವೇಶ್ವರ, ಅಕ್ಕಮಹಾದೇವಿ, ಜೇಡರ ದಾಸಿಮಯ್ಯ ಮೊದಲಾದ ವಚನಗಳನ್ನು ಗಾಯನ ಮಾಡಿದರು. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಶಾಲೆಯ ಶಿಕ್ಷಕ ಟಿ.ಎಸ್.ಶಶಿಕುಮಾರ್, ಶಿಕ್ಷಕಿ ಆಶಾ, ಐರಿನ್, ರಮ್ಯಾ, ಪುಷ್ಪಲತಾ, ಮೇರಿ, ಸುನೀತಾ ಮೊದಲಾದವರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಊರ್ ಮಂದ್ ಗಳ ಒತ್ತುವರಿ ತೆರವಿಗೆ ಬಲ್ಲಾರಂಡ ಮಣಿ ಉತ್ತಪ್ಪ ಆಗ್ರಹ*
Next Article *ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಶುಚಿತ್ವ ಕುರಿತು ಜಾಗೃತಿ ಅಭಿಯಾನ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

ಬೆಂಗಳೂರು ಗ್ರಾಮಾಂತರ: ಶುಕ್ರವಾರ ಬೆಳ್ಳಂಬೆಳಗ್ಗೆ ಹೊಸಕೋಟೆ ಬಳಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಆರು ಮಂದಿ ವಿದ್ಯಾರ್ಥಿಗಳು ಹಾಗೂ…

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.