




ಮಡಿಕೇರಿ ಡಿ.19 NEWS DESK : ರೈತರ ಕೃಷಿಭೂಮಿಯನ್ನು ರೈತರಿಗೆ ಮಂಜೂರು ಮಾಡಬೇಕು, ಸಿ ಮತ್ತು ಡಿ ಭೂಮಿ ಗೊಂದಲ ನಿವಾರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿ.20 ರಂದು ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳು ಮಡಿಕೇರಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ ಎಂ.ಧನಂಜಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದ ಆಸ್ತಿಯಾಗಿರುವ ಮತ್ತು ಆರ್ಥಿಕ ಕ್ಷೇತ್ರಕ್ಕೆ ಬಲ ತುಂಬುತ್ತಿರುವ ರೈತರ ನ್ಯಾಯೋಚಿತ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕು. ತಲೆತಲಾಂತರಗಳಿಂದ ಕೃಷಿ ಕಾರ್ಯ ಮಾಡಿಕೊಂಡು ಬಂದಿರುವ ರೈತರ ಹಿತ ಕಾಯಬೇಕು. ಹಸಿರು ನ್ಯಾಯಾಲಯಕ್ಕೆ ಒತ್ತಡ ಹಾಕಿ ಸ್ಥಳೀಯ ಜನರನ್ನು ಒಕ್ಕಲೆಬ್ಬಿಸುವುದನ್ನು ತಪ್ಪಿಸಬೇಕು ಎಂಬಿತ್ಯಾದಿ ಬೇಡಿಕೆಗಳಿಗೆ ನನ್ನ ಸಹಮತವಿದ್ದು, ಹೋರಾಟದಲ್ಲಿ ಪಾಲ್ಗೊಂಡು ಕೃಷಿಕ ವರ್ಗಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.