ಮಡಿಕೇರಿ ಡಿ.19 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸಂಸತ್‍ನಲ್ಲಿ ಪ್ರಸ್ತಾಪಿಸಿ ಅಪಹಾಸ್ಯ ಮಾಡಿರುವ ಕೇಂದ್ರ್ರ ಗೃಹ ಸಚಿವ ಅಮಿತ್ ಷಾ ಅವರ ನಿಲುವನ್ನು ಖಂಡಿಸಿ ಡಿ.24 ರಂದು ನಗರದಲ್ಲಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಒಕ್ಕೂಟದ ಪ್ರಮುಖರು, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸುವ ಮೂಲಕ ಅಮಿತ್ ಷಾ ಅವರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ತಕ್ಷಣವೆ ಗೃಹ ಸಚಿವರು ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಯಾಚನೆ ಮಾಡಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು. ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಡಿ.24 ರಂದು ಬೆಳಗ್ಗೆ 11 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆದು, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುತ್ತದೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ದಸಂಸ ಸಂಚಾಲಕರಾದ ದಿವಾಕರ್, ಒಕ್ಕೂಟದ ಸಂಚಾಲಕ ಮೋಹನ್ ಮೌರ್ಯ, ಕಾರ್ಯದರ್ಶಿ ಗಣೇಶ್, ಪ್ರಮುಖರಾದ ಇಸಾಖಾನ್, ಮುಸ್ತಪಾ ಉಪಸ್ಥಿತರಿದ್ದರು.