ವಿರಾಜಪೇಟೆ ಡಿ.19 NEWS DESK : ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಭಾರತ ಭೂಷಣ ಹಾಗೂ ಕರುನಾಡ ಭೂಷಣ ರಾಷ್ಟ್ರೀಯ ಪ್ರಶಸ್ತಿ ಮತ್ತು ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕೆಪಿಸಿಸಿ ಸಂಯೋಜಕ ಮಂಜುನಾಥ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಶಿಧರ್ ಕೋಟೆ, ಡಾ.ಕೆಂಚನೂರು ಶಂಕರ್, ಡಾ.ಶ್ರೀಧರ್, ಕಾಂತಿ ಶೆಟ್ಟಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತೋತಾಪುರಿ ಸೋಮಶೇಖರ ಗುರೂಜಿ ಕಲೆಯನ್ನು ಪ್ರೋತ್ಸಾಹಿಸಬೇಕು ಎಂದು ಹಿತನುಡಿಗಳನ್ನಾಡಿದರು. ಮಲ್ಲಿಕಾ ಕೇಶವ್, ವೆಂಕಟರಾಜು ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್‍ನ ಪ್ರೇಮಂಜಲಿ ಇದ್ದರು. ಅನೇಕ ಕಡೆಗಳಿಂದ ನೃತ್ಯ ತಂಡಗಳು ಆಗಮಿಸಿ ಉತ್ತಮ ನೃತ್ಯ ಪ್ರದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಸುಮಾರು 80 ಜನರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.