
ಮಡಿಕೇರಿ ಡಿ.20 NEWS DESK : ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ 2025 ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಜಾಗೃತಿ ನಡಿಗೆ ಕಾರ್ಯಕ್ರಮ ನಡೆಯಿತು. ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನವರೆಗೆ ನಡೆದ ಜಾಥಾವನ್ನು ಕೊಡಗು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು. ಕೃಷಿ ಇಲಾಖೆಯಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ’ ಪಾಕ ಸ್ಪರ್ಧೆ ನಡೆಯಲಿದೆ.










