ಮಡಿಕೇರಿ NEWS DESK ಡಿ.20 : ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಬೃಹತ್ ಪ್ರತಿಭಟನಾ ಜಾಥ ನಡೆಯಿತು. ::: ಬೇಡಿಕೆಗಳು ::: *ಅವೈಜ್ಞಾನಿಕವಾಗಿ ಮಾಡಿರುವ ಸಿ & ಡಿ ಸರ್ವೆಯನ್ನು ರದ್ದುಗೊಳಿಸಿ, ಮರು ಸರ್ವೆ ಮಾಡಿ ರೈತರ ವ್ಯವಸಾಯ ಮಾಡಿರುವ ಭೂಮಿಯನ್ನು ರೈತರ ಹೆಸರಿಗೆ ಮಂಜೂರು ಮಾಡಬೇಕು. *ಯಾವುದೇ ಮಾಹಿತಿ ಇಲ್ಲದೆ ಮಾಡಿರುವ ಮೀಸಲು ಅರಣ್ಯ, ಸೆಕ್ಷನ್ 4/5 ಅನ್ನು ಕೈಬಿಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಸಿರು ನ್ಯಾಯಾಲಯಕ್ಕೆ ಒತ್ತಡ ಹಾಕಿ ಸ್ಥಳೀಯ ಜನರನ್ನು ಒಕ್ಕಲೆಬ್ಬಿಸುವುದನ್ನು ತಪ್ಪಿಸಬೇಕು. *ಅರಣ್ಯ ಹಾಗೂ ಕಂದಾಯ ಇಲಾಖೆಯವರು ವಾಸ್ತವತೆ ಅರಿಯದೆ ಮಾಡಿರುವ ಡೀಮ್ಸ್ ಫಾರೆಸ್ಟ್ ಕಾಯ್ದೆಯನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕು. *ಕಸ್ತೂರಿರಂಗನ್ ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಿರಸ್ಕರಿಸಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದ ಹಾಗೆ ಕೇರಳ ಮಾದರಿಯಂತೆ ಚಾರಿ ಮಾಡಬೇಕು. *ಊರುಉಡುವೆ, ದೇವರಕಾಡು, ಗೋಮಾಳ ಇವುಗಳನ್ನು ನಮ್ಮ ಪೂರ್ವಿಕರು ಊರಿನ ಹಿತದೃಷ್ಠಿಯಿಂದ ಮೀಸಲು ಮಾಡಿರುವ ಭೂಮಿಯಾಗಿದ್ದು, ಅದನ್ನು ಅರಣ್ಯ ಇಲಾಖೆಯ ಅಧೀನಕ್ಕೆ ಒಳಪಡಿಸದೆ, ಮೊದಲಿನಂತೆ ಗ್ರಾಮದ ಅಧೀನಕ್ಕೆ ಒಳಪಡಿಸಬೇಕು. *ಈ ಅವೈಜ್ಞಾನಿಕ ಅರಣ್ಯ ಕಾಯ್ದೆಯಿಂದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ 50, 53, 57 ಅರ್ಜಿಗಳಿಗೆ ಅನುಗುಣವಾಗಿ ರೈತರಿಗೆ ಯಾವುದೇ ಅಡೆತಡೆಗಳಿಲ್ಲದೆ ಹಕ್ಕು ಪತ್ರ ವಿತರಿಸಬೇಕು. *ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ ದುರಸ್ಥಿ ಕಡತಗಳನ್ನು ಆದಷ್ಟು ಬೇಗ ದುರಸ್ಥಿ ಮಾಡಿಕೊಡಬೇಕು. *ಬಡವರು ಕಟ್ಟಿರುವ ಮನೆಗಳಿಗೆ 94ಸಿ ಅನ್ನು ಮೊದಲಿನಂತೆ ದಾಖಲಾತಿ ವಿತರಿಸಬೇಕು. *ರೈತರಿಗೆ 10 ಹೆಚ್. ಪಿ. ಪಂಪ್ ಸೆಟ್ಗೆ ಉಚಿತ ವಿದ್ಯುತ್ ನೀಡಬೇಕು. *ಮಾನವ ಹಾಗೂ ವನ್ಯಜೀವಿಗಳ ಸಂಘರ್ಷದಲ್ಲಿ ನಮ್ಮ ಬದುಕುವ ಹಕ್ಕನ್ನು ಅರಣ್ಯ ಇಲಾಖೆಯ ಮೂಲಕ ಕಸಿದುಕೊಳ್ಳಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.