
ಹುಣುಸೂರು NEWS DESK ಡಿ.20 : ಜಾನುವಾರುಗಳು ಸೇರಿದಂತೆ ಸಾಕು ಪ್ರಾಣಿಗಳನ್ನು ಬೇಟೆಯಾಡಿ ತಿನ್ನುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹುಣುಸೂರು ತಾಲ್ಲೂಕಿನ ಗಾವಡಗೆರೆ ಸುತ್ತಮುತ್ತ ಉಪಟಳ ನೀಡುತ್ತಿದ್ದ 9ವರ್ಷದ ಚಿರತೆ ಬೋನ್ ನಲ್ಲಿ ಸೆರೆಯಾಗಿದೆ. ಜಾನುವಾರುಗಳನ್ನು ಭಕ್ಷಿಸುತ್ತಿದ್ದ ಚಿರತೆಯನ್ನು ತಕ್ಷಣ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ ಹಿನ್ನೆಲೆ ಸಣ್ಣಸ್ವಾಮಿ ನಾಯಕರ ಜಮೀನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನ್ ಇರಿಸಿದ್ದರು.












