





ಸೋಮವಾರಪೇಟೆ ಡಿ.20 NEWS DESK : ಕೊಡಗು ಪತ್ರಕರ್ತರ ಸಂಘ ಹಾಗೂ ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಡಿ.22 ರಂದು ಜಿಲ್ಲೆಯ ಪತ್ರಕರ್ತರಿಗೆ ಕೆ.ಪಿ.ಎಸ್ ಕ್ರಿಕೆಟ್ ಲೀಗ್ ಪಂದ್ಯಾಟ ಮತ್ತು ಪತ್ರಕರ್ತರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಕೊಡಗು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್.ಎ.ಮುರಳೀಧರ್ ಮಾತನಾಡಿ, ಡಿ.22 ರಂದು ತಾಲೂಕಿನ ಬೇಳೂರು ಪಂಚಾಯಿತಿ ವ್ಯಾಪ್ತಿಯ ಬಳಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ.ಮೈಸೂರಿನ ನಾರಾಯಣ ಹೆಲ್ತ್ ಸಿಟಿ ಸೆಂಟರ್‌ನ ಆಶ್ರಯದಲ್ಲಿ ನಡೆಯಲಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬಳಗುಂದ ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಅಖಿಲ ಭಾರತೀಯ ಸಂತ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್‌ನಾಥ್ ಗುರೂಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕ್ರಿಕೆಟ್
ಪಂದ್ಯಾವಳಿಯನ್ನು ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೆಶಕರಾದ ಹರಪಳ್ಳಿ ರವೀಂದ್ರ, ಕೊಡಗು ಪತ್ರಿಕಾ ಭವನದ ಸ್ಥಾಪಕ ಅಧ್ಯಕ್ಷ ಟಿ.ಪಿ.ರಮೇಶ್, ಕೆ.ಪಿ.ಸಿ.ಸಿ. ಸದಸ್ಯ ಕೆ.ಎ.ಯಾಕೂಬ್, ಬೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಾರ್ವತಿ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ತಾಲೂಕು ಅಭಿವೃದ್ದಿ ಹೋರಾಟ ಸಮಿತಿ ಅಧ್ಯಕ್ಷರಾದ ಅರುಣ್ ಕೊತ್ನಳ್ಳಿ, ಉದ್ಯಮಿ ಸುಗುರಾಜ್, ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಸಂಜೆ 4.30ಕ್ಕೆ ಕೋವರ್‌ಕೊಲ್ಲಿಯ ಕೂರ್ಗ್ ಬ್ಲಾಸಂ ರೆಸಾರ್ಟ್ನಲ್ಲಿ ನಡೆಯಲಿದ್ದು, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಪ್ಪಚ್ಚು ರಂಜನ್,ಉದ್ಯಮಿಗಳಾದ ನಾಪಂಡ ಮುತ್ತಪ್ಪ, ಮಧು ಬಾಗೇರಿ, ಸಿಆರ್‌ಪಿಎಫ್ ನಿವೃತ್ತ ಕಮಾಂಡೆಂಟ್ ಬಿ.ಬಿ.ಮಂಜುನಾಥ್, ಬೇಳೂರು ಗ್ರಾ.ಪಂ ಉಪಾಧ್ಯಕ್ಷ ಕೆ.ಪಿ, ಸುದರ್ಶನ್, ವಿಜಿಲೆನ್ಸ್ ಸಹಾಯಕ ವ್ಯವಸ್ಥಾಪಕ ಎಸ್.ಆರ್.ಅಶೋಕ್ ಕುಮಾರ್, ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಿ.ವಿ.ರವಿಕುಮಾರ್,ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು,ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುಧೋಶ್ ಪೂವಯ್ಯ,ಪೊನ್ನಂಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜ್ ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ. ಗೋಷ್ಠಿಯಲ್ಲಿ ತಾಲೂಕು ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್,ಉಪಾಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ, ಪ್ರಧಾನ ಕಾರ್ಯದರ್ಶಿ ಡಿ.ಪಿ.ಲೋಕೇಶ್,ಖಜಾಂಚಿ ದುಷ್ಯಂತ್ ಕುಮಾರ್ ಮತ್ತು ಪದಾಧಿಕಾರಿಗಳು ಇದ್ದರು.