


ಬೆಂಗಳೂರು NEWS DESK ಡಿ.20 : ಭಾರತೀಯ ಸೇನೆಯು ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) ನೇಮಕಾತಿ ರ‍್ಯಾಲಿಯನ್ನು 2025 ಜನವರಿ 6 ಮತ್ತು 7 ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) ನೇಮಕಾತಿ ರ‍್ಯಾಲಿ ನಡೆಯಲಿದೆ. ಕರ್ನಾಟಕ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾರ್ಟ್‌ಲಿಸ್ಟ್ ಮಾಡಿದ ಮಹಿಳಾ ಅಭ್ಯರ್ಥಿಗಳಿಗಾಗಿ ಈ ರ‍್ಯಾಲಿಯನ್ನು ಆಯೋಜಿಸಲಾಗಿದೆ. ಲಕ್ಷದ್ವೀಪ ಮತ್ತು ಮಾಹೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಕಾರ್ಡ್‌ಗಳನ್ನು www.joinindianarmy.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು 6 ಜನವರಿ 2025 ರಂದು ನಿಗದಿತ ಸಮಯದಲ್ಲಿ ಕ್ರೀಡಾಂಗಣದ ಗೇಟ್ ಸಂಖ್ಯೆ 2 ರಲ್ಲಿ ವರದಿ ಮಾಡಲು ಪ್ರಕಟಣೆ ತಿಳಿಸಿದೆ. ಆಯ್ಕೆಯು ಅರ್ಹತೆ-ಆಧಾರಿತವಾಗಿರುತ್ತದೆ, ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಮತ್ತು ರ‍್ಯಾಲಿಯಲ್ಲಿನ ಪರೀಕ್ಷೆಗಳಲ್ಲಿನ ಕಾರ್ಯಕ್ಷಮತೆಯಿಂದ ನಿರ್ಧರಿಸಲಾಗುತ್ತದೆ.