


ಮಡಿಕೇರಿ NEWS DESK ಡಿ.20 : ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿಯ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಬಂಧನವನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಡಿ.20 ರಂದು ಮಧ್ಯಾಹ್ನ 2.30 ಗಂಟೆಗೆ ಬಿಜೆಪಿ ವತಿಯಿಂದ ದಿಢೀರ್ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಪ್ರತಿಭಟನೆ ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯಲಿದೆ.