Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು : ಪೋಷಕರು ಕಾಲಕಾಲಕ್ಕೆ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ : ರವಿಕೃಷ್ಣ.ಡಿ.ಕಲ್ಲಾಜೆ ಸಲಹೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಡಿಯೋ ಗ್ಯಾಲರಿ

ಪುತ್ತೂರು : ಪೋಷಕರು ಕಾಲಕಾಲಕ್ಕೆ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ : ರವಿಕೃಷ್ಣ.ಡಿ.ಕಲ್ಲಾಜೆ ಸಲಹೆ

ಡಿಸೆಂಬರ್ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಡಿ.20 NEWS DESK : ಪ್ರಸಕ್ತ ಸನ್ನಿವೇಶದಲ್ಲಿ ಸಮಾಜದಲ್ಲಿ ಒಳ್ಳೆಯದಕ್ಕೆ ಎಷ್ಟು ಆಸ್ಪದವಿದೆಯೋ ಕೆಟ್ಟದ್ದಕ್ಕೂ ಅಷ್ಟೇ ಆಸ್ಪದವಿದೆ. ಹೀಗಾಗಿ ಪೋಷಕರುತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳು ಮತ್ತು ಶೈಕ್ಷಣಿಕ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಸಂಯುಕ್ತ ಆಶ್ರಯದಲ್ಲಿ ಸಾವರ್ಕರ್ ಸಭಾಭವನದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಮಾಲೋಚನ ಸಭೆಯ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಉಪನ್ಯಾಸಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳನ್ನು ಗಮನಿಸುತ್ತಾರೆ, ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಶಿಕ್ಷಕರನ್ನು ಸಂಪರ್ಕಿಸುವುದು ವಿದ್ಯಾರ್ಥಿಯ ಕರ್ತವ್ಯ ಅದೇ ರೀತಿ ಪೋಷಕರೂ ಕೂಡಾ ಆಗಾಗ ಕಾಲೇಜಿಗೆ ಭೇಟಿ ನೀಡಿ ತಮ್ಮ ಮಕ್ಕಳ ಬಗ್ಗೆ ತಿಳಿದುಕೊಳ್ಳಿ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಕೆಲವೊಂದು ಕಟ್ಟುಪಾಡುಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಇದರ ಪಾಲನೆಗೆ ಹೆತ್ತವರ ಮತ್ತು ಪೋಷಕರ ಸಹಕಾರ ಅಗತ್ಯ ಎಂದು ಹೇಳಿದರು. ಹೊಸ ಶೈಕ್ಷಣಿಕ ಪದ್ದತಿಯ ಪ್ರಕಾರ ವಿದ್ಯಾರ್ಥಿಗಳ ಹಾಜರಾತಿ, ಆಂತರಿಕ ಮೌಲ್ಯಮಾಪನ, ಅಂಕಗಳು ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ನೀಡಿದರು. ಪೇರೆಂಟ್ ರಿಲೇಶನ್ ಸೆಲ್‍ನ ಅಧ್ಯಕ್ಷ ಈಶ್ವರಪ್ರಸಾದ್ ಹೆತ್ತವರು ಮತ್ತು ಕಾಲೇಜಿನ ನಡುವಿನ ಬಾಂಧವ್ಯದ ಅಗತ್ಯತೆಯ ಬಗ್ಗೆ ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್ ಮಾತನಾಡಿ, ಪೋಷಕರು ವಿದ್ಯಾರ್ಥಿಗಳ ಪ್ರಗತಿಯನ್ನು ಗಮನಿಸಿವುದಕ್ಕೆ ಆಗಾಗ ಕಾಲೇಜಿಗೆ ಭೇಟಿ ನೀಡಿ ವಿಭಾಗ ಮುಖ್ಯಸ್ಥರೊಂದಿಗೆ ಮತ್ತು ಪ್ರಾಧ್ಯಾಪಕರೊಂದಿಗೆ ಮಾತುಕತೆ ನಡೆಸಬೇಕು ಎಂದರು. ಸಾಮಾಜಿಕ ಜಾಲತಾಣಗಳ ಬಳಕೆ, ವಾಹನಗಳ ಬಳಕೆಯ ಬಗ್ಗೆ ಮಕ್ಕಳಿಗೆ ಎಚ್ಚರಿಕೆಯನ್ನು ನೀಡಬೇಕು ಮತ್ತು ಅವುಗಳಿಂದಾಗುವ ಹಾನಿಯ ಬಗ್ಗೆ ಮನವರಿಕೆ ಮಾಡಬೇಕು ಎಂದರು. ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸಭಾ ಕಾರ್ಯಕ್ರಮದ ಮೊದಲು ತಮ್ಮ ಮಕ್ಕಳಿಗೆ ಕಲಿಸುವ ಎಲ್ಲಾ ಪ್ರಾಧ್ಯಾಪಕರ ಜತೆ ಪೋಷಕರು ಸಂವಹನವನ್ನು ನಡೆಸಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ತಿಳಿದುಕೊಂಡರು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ನಿರ್ದೇಶಕ ಸತ್ಯನಾರಾಯಣ ಭಟ್, ಪೇರೆಂಟ್ ರಿಲೇಶನ್ ಸೆಲ್‍ನ ಸಹ ಕಾರ್ಯದರ್ಶಿ ದೀಪಾ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಸ್ವಾಗತಿಸಿದರು. ಪೇರೆಂಟ್ ರಿಲೇಶನ್ ಸೆಲ್‍ನ ಸಂಚಾಲಕಿ ಡಾ.ಶ್ವೇತಾಂಬಿಕಾ.ಪಿ ಪ್ರಸ್ತಾವನೆಗೈದರು. ಕಾರ್ಯಕ್ರಮ ಸಂಯೋಜಕಿ ಪ್ರೊ.ಶ್ರೀಶರಣ್ಯ ಯು ಆರ್ ವಂದನಾರ್ಪಣೆಗೈದರು. ಡಾ.ರವೀಶ್.ಪಿ.ಎಂ ಮತ್ತು ಪ್ರೊ.ಅನ್ನಪೂರ್ಣಾ.ಬಿ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.