




ಮಡಿಕೇರಿ ಡಿ.20 NEWS DESK : ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಚೊಕ್ಕಾಡಿ ಎನ್.ಅಪ್ಪಯ್ಯ ಆಯ್ಕೆಯಾಗಿದ್ದಾರೆ. ನಗರದ ಗೌಡ ಸಮಾಜದಲ್ಲಿ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶೆಟ್ಟಜನ ಗಣಪತಿ, ಕಾರ್ಯದರ್ಶಿ ಪುದಿಯನೆರವನ ರೇವತಿ, ಖಜಾಂಚಿ ಕುಯ್ಯಮುಡಿ ಅಶ್ವಿನಿ ಕುಮಾರ್ ಹಾಗೂ ಸಹ ಕಾರ್ಯದರ್ಶಿಯಾಗಿ ಕಟ್ರತನ ಲಲಿತಾ ಅಯ್ಯಣ್ಣ ಆಯ್ಕೆಯಾದರು. ಇತ್ತೀಚಿಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಆಡಳಿತ ಮಂಡಳಿಗೆ 16 ನಿರ್ದೇಶಕರುಗಳನ್ನು ಆಯ್ಕೆ ಮಾಡಲಾಯಿತು.