ಮಡಿಕೇರಿ ಡಿ.21 NEWS DESK : ಈ ಬಾರಿಯ ರಾಜ್ಯ ಮಟ್ಟದ ಯುವ ಜನೋತ್ಸವ ದಾವಣಗೆರೆಯಲ್ಲಿ ಜ.4 ಮತ್ತು 5 ರಂದು ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಾನಪದ ನೃತ್ಯ, ಜಾನಪದ ಗೀತೆ, ಕವಿತೆ ಬರೆಯುವುದು, ಚಿತ್ರಕಲೆ, ಕಥೆ ಬರೆಯುವುದು ವಿಷಾಯಧಾರಿತ ಸ್ಪರ್ಧೆ (ವಿಜ್ಞಾನ ಮೇಳ) ಹಾಗೂ ಘೋಷಣೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ತಂಡ ಮತ್ತು ವೈಯಕ್ತಿಯವಾಗಿ ಪ್ರಥಮ ಸ್ಥಾನ ಪಡೆದವರು ಭಾಗವಹಿಸುವಂತೆ ಮನವಿ ಮಾಡಿದರು.
ಹಾಜರಾಗುವ ಸ್ಪರ್ಧಿಗಳು ಕೊಡಗು ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳಿಂದ ಪ್ರಮಾಣಪತ್ರವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಭಾಗವಹಿಸುವವರು ಲಘು ಹಾಸಿಗೆ, ಹೊದಿಕೆ, ಆಧಾರ್ ಕಾಡ್/ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಅಥವಾ ಶಾಲಾ ಪ್ರಮಾಣ ಪತ್ರ ಸಣ್ಣ ಬೀಗ ತರುವಂತೆ ತಿಳಿಸಿದರು. ಸ್ಪರ್ಧಿಗಳು ಜ.4 ರಂದು ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯ ಒಳಗೆ ದಾವಣಗೆರೆಯಲ್ಲಿ ಮೊ.ಸಂ 827793001, 9380321534 ಕರೆ ಮಾಡಿ ನೊಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.