ಕುಶಾಲನಗರ ಡಿ.21 NEWS DESK : ಉತ್ತಮ ಉದ್ದೇಶ ಹಾಗೂ ಗುರಿಯೊಂದಿಗೆ ಕಾರ್ಯಯೋಜನೆ ರೂಪಿಸಿ ಕಾರ್ಯಕ್ರಮಗಳನ್ನು ಅನುμÁ್ಠನಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ರೋಟರಿ 3181 ಜಿಲ್ಲಾ ರಾಜ್ಯಪಾಲ ವಿಕ್ರಂ ದತ್ತ ಕರೆ ನೀಡಿದ್ದಾರೆ. ಕುಶಾಲನಗರ ರೋಟರಿಗೆ ಅಧಿಕೃತ ಭೇಟಿ ನೀಡಿ ವಾರ್ಷಿಕ ಕಾರ್ಯ ಚಟುವಟಿಕೆ ಬಗ್ಗೆ ಪರಿಶೀಲನೆ ನಡೆಸಿ, ನಂತರ ನಡೆದ ಸಮಾರಂಭದಲ್ಲಿ ಪಾಲ್ಗೊಮಡು ಅವರು ಮಾತನಾಡಿದರು. ರೋಟರಿ ಸದಸ್ಯರು ತ್ಯಾಗ ಮನೋಭಾವನೆ ಮೂಲಕ ಕಾರ್ಯಯೋಜನೆ ರೂಪಿಸುತ್ತಾರೆ. ಇತರರಿಗೆ ನೆರವು ನೀಡುವ ಉದ್ದೇಶದೊಂದಿಗೆ ಸೇವೆ ಸಲ್ಲಿಸುತ್ತಾರೆ ಎಂದರು. ರೋಟರಿ ಸಂಸ್ಥೆಯ ಮೂಲಕ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಅಸಹಾಯಕರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಎಲ್ಲೆಡೆ ಕಾರ್ಯಕ್ರಮಗಳು ರೂಪುಗೊಳ್ಳುತ್ತಿವೆ ಎಂದ ಅವರು, ಕುಶಾಲನಗರ ರೋಟರಿ ಸಂಸ್ಥೆಯ ಮೂಲಕ ಸರಕಾರಿ ಆಸ್ಪತ್ರೆಗೆ ನೀಡಲಾದ ಡಯಾಲಿಸಿಸ್ ಘಟಕ ಸೇರಿದಂತೆ ಹಲವು ಕಾರ್ಯಯೋಜನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಕುಶಾಲನಗರ ರೋಟರಿ ಅಧ್ಯಕ್ಷ ಸಿ.ಬಿ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಕ್ರೀಡಾ ಕ್ಷೇತ್ರದಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಬಾಲಕಿ ಆಜ್ಞ ಅಮಿತ್ ಮತ್ತು ನಿವೃತ್ತ ಸೈನಿಕರು ಹಾಗೂ ಸಮಾಜಸೇವಕರಾದ ಕೆ.ಕೆ.ಕಾಳಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಇದೇ ಸಂದರ್ಭ ಕ್ಲಬ್ ಬುಲೆಟಿನ್ ಬಿಡುಗಡೆಗೊಳಿಸಲಾಯಿತು. ರೋಟರಿ ಸಹಾಯಕ ರಾಜ್ಯಪಾಲ ಡಾ.ಹರಿ ಎ.ಶೆಟ್ಟಿ, ವಲಯ ಪ್ರಮುಖರಾದ ಪ್ರಕಾಶ್ ಕುಮಾರ್ ಮಾತನಾಡಿದರು. ಕಾರ್ಯದರ್ಶಿ ಕಿರಣ್ ವಾರ್ಷಿಕ ವರದಿ ವಾಚಿಸಿದರು. ಕುಶಾಲನಗರ ರೋಟರಿ ಪದಾಧಿಕಾರಿಗಳು, ರೋಟರಿ ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.