ನವದೆಹಲಿ NEWS DESK ಡಿ.22 : ಭಾರತೀಯರ ಶ್ರದ್ಧಾಭಕ್ತಿಯ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತ ಅರೇಬಿಕ್ ಭಾಷೆಗೆ ಅನುವಾದವಾಗಿದೆ. ಕುವೈತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಾಭಾರತ ಮತ್ತು ರಾಮಾಯಣವನ್ನು ಅರೇಬಿಕ್ ಭಾಷೆಗೆ ಅನುವಾದಿಸಿ ಪ್ರಕಟಿಸಿದ ಇಬ್ಬರು ಲೇಖಕರನ್ನು ಭೇಟಿ ಮಾಡಿದ್ದು, ಈ ಫೋಟೋ ಭಾರೀ ವೈರಲ್ ಆಗಿದೆ. ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಲೇಖಕರನ್ನು ಭೇಟಿ ಮಾಡಿ ಎರಡು ಮಹಾಕಾವ್ಯಗಳ ಅರೇಬಿಕ್ ಆವೃತ್ತಿಗಳಿಗೆ ಸಹಿ ಹಾಕಿದರು. “ರಾಮಾಯಣ ಮತ್ತು ಮಹಾಭಾರತದ ಅರೇಬಿಕ್ ಭಾಷಾಂತರಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ನಾನು ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನೆಸೆಫ್ ಅವರ ಅನುವಾದ ಮತ್ತು ಪ್ರಕಟಣೆಯಲ್ಲಿ ಅವರ ಪ್ರಯತ್ನಗಳಿಗಾಗಿ ಅಭಿನಂದಿಸುತ್ತೇನೆ. ಅವರ ಈ ಕ್ರಮವು ಜಾಗತಿಕವಾಗಿ ಭಾರತೀಯ ಸಂಸ್ಕೃತಿಯ ಜನಪ್ರಿಯತೆಯನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸುಮಾರು 43 ವರ್ಷಗಳ ನಂತರ ಗಲ್ಫ್ ರಾಷ್ಟ್ರಕ್ಕೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿದ್ದಾರೆ.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*