ನವದೆಹಲಿ NEWS DESK ಡಿ.22 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 20ನೇ ಅಂತರರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುವೈತ್ ನ ಅತ್ಯುನ್ನತ ಗೌರವವಾದ “ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್” ಪ್ರಶಸ್ತಿಯನ್ನು ಮೋದಿ ಸ್ವೀಕರಿಸಿದ್ದಾರೆ. ಕುವೈತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೈತ್ ನ ರಾಜ ಶೇಕ್ ಮಿಶಾಲ್ ಅಲ್ ಅಹಮದ್ ಅಲ್ ಜಾಬೆರ್ ಸಬಾ ಅವರು ಪ್ರಧಾನಿ ಮೋದಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ವಿದೇಶಿ ಗಣ್ಯರು ಮತ್ತು ರಾಜಮನೆತದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ಈ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ ಎಂದು ಕುವೈತ್ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನಗಳ ಭೇಟಿಗಾಗಿ ಶನಿವಾರ ಕುವೈತ್ ಗೆ ತೆರಳಿದ ಪ್ರಧಾನಿ ಮೋದಿ ಅವರು ಭಾನುವಾರ ಕುವೈತ್ ರಾಜ ಶೇಕ್ ಮಿಶಾಲ್ ಅಲ್ ಅಹಮದ್ ಅಲ್ ಜಾಬೆರ್ ಅಲ್ ಸಾಬಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.