ಮಡಿಕೇರಿ ಡಿ.23 NEWS DESK : ಹಾತೂರು ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ನೂತನ ಕಟ್ಟಡದಲ್ಲಿ ಹಾತೂರು ಪಂಚಾಯಿತಿ ಯಶಸ್ಸು ಕಂಡು ಜನಸಾಮಾನ್ಯರ ಕುಂದು ಕೊರತೆಗಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುವಂತಾಗಲಿ ಎಂದು ಶುಭಹಾರೈಸಿದರು.