ಕೂಡಿಗೆ ಡಿ.24 NEWS DESK : ಜಿಲ್ಲಾಡಳಿತ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ತಾಲ್ಲೂಕಿನ
ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡಿ.26 ರಂದು 11.00 ಗಂಟೆಗೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆ: 2024 ಯನ್ನು ಏರ್ಪಡಿಸಲಾಗಿದೆ.
ಪ್ರಭಾರ ಜಿಲ್ಲಾಧಿಕಾರಿಯೂ ಆದ ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಲಿದ್ದು, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣಿ, ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷ ಎ.ಎ.ಚಂಗಪ್ಪ, ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ , ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಮಹತ್ವ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್ ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.











