ಗುಂಡ್ಲುಪೇಟೆ NEWS DESK ಡಿ.25 : ಜಾನುವಾರಗಳ ಮೇಲೆ ದಾಳಿ ಮಾಡಿ ಭಕ್ಷಿಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಗುಂಡ್ಲುಪೇಟೆ ವಿಭಾಗದ ಅರಣ್ಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರುಕೇರಿ, ಕೋಡಹಳ್ಳಿ ಮತ್ತಿತರ ಸುತ್ತಮುತ್ತಲ ಪ್ರದೇಶಗಳಲ್ಲಿ ಜಾನುವಾರು ಮತ್ತು ಮೇಕೆಗಳನ್ನು ತಿಂದು ಆತಂಕ ಸೃಷ್ಟಿಸಿದ್ದ ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಅಣ್ಣೂರುಕೇರಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಬೋನ್ ಇರಿಸಿದ್ದರು. ನಿರೀಕ್ಷೆಯಂತೆ ಸುಮಾರು 3 ವರ್ಷದ ಗಂಡು ಚಿರತೆ ಬೋನ್ ನಲ್ಲಿ ಸೆರೆಯಾಗಿದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.