ಮಡಿಕೇರಿ ಡಿ.25 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ಜಾತ್ರೋತ್ಸವವು ಆರಂಭಗೊಂಡಿದ್ದು, ಮೊದಲದಿನ ದೇವರಿಗೆ ಹೊರೆಕಾಣಿಕೆ ಸಮರ್ಪಿಸಲಾಯಿತು. ಮುಂಜಾನೆ ಗಣಪತಿ ಹೋಮ, ಹೊರೆಕಾಣಿಕೆ ಸಮರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಮಧ್ಯಾಹ್ನ ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ಸಂಜೆ ಧ್ವಜಾರೋಹಣದ ಬಳಿಕ ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಡಿ.24 ರಂದು ನೈರ್ಮಾಲ್ಯ ಬಲಿ, ಮಧ್ಯಾಹ್ನ ಧ್ವಜಸ್ತಂಭ ಪೂಜೆ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀಭೂತಬಲಿ (ತೂಚಂಬಲಿ), ಧ್ವಜಸ್ತಂಭ ಪೂಜೆ ನೆರವೇರಿತು. ರಾತ್ರಿ ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.